ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಂದ ಪ್ರಗತಿ ಪರಿಶೀಲನೆ
ಬೆಂಗಳೂರು: ಯಶವಂತಪುರದ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟಿಸ್ ಲಿಮಿಟೆಡ್” ಸಂಸ್ಥೆಯ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನೇತೃತ್ವದಲ್ಲಿ ಜರುಗಿತು.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಎಂ.ಇ.ಐ. ನಿಗಮದ ಅಧ್ಯಕ್ಷ ಎಸ್.ಮನೋಹರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಅಪರ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನೀರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ್ ಎನ್. ಮತ್ತು ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ, ಆಡಳಿತ ವರ್ಗದ ಅಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ಮಾತನಾಡಿದ ಕೆ.ಜೆ.ಜಾರ್ಜ್, ಎಂ.ಇ.ಐ. ಮತ್ತು ಕವಿಕಾ ಎರಡು ಕಂಪನಿಗಳು ಚನ್ನಾಗಿ ಕೆಲಸ ಮಾಡುತ್ತಿವೆ. ವಿದ್ಯುತ್ ಪರಿವರ್ತಕ (ಟ್ರಾನ್ಸಫಾರ್ಮರ್) ಬೇಡಿಕೆ ಹೆಚ್ಚಿದೆ. ಸರ್ಕಾರದ ಅರ್ಡರ್ ಇದೆ. ತಯಾರಿಕೆ ಮಾಡಲು ಸಂಸ್ಥೆಯು ಸಶಕ್ತವಾಗಿ ಕೆಲಸ ಮಾಡುತ್ತಿದೆ. ಎಂ.ಇ.ಐ.ಸಂಸ್ಥೆಯ ಲಾಭದಾಯಕದತ್ತ ಸಾಗುತ್ತಿದೆ ಎಂದರು.
ರಾಜ್ಯದಲ್ಲಿ ಕಳೆದ ಎಂಟು ತಿಂಗಳಿಂದ ಪವರ್ ಕಟ್ ಸಮಸ್ಯೆ ಉಂಟಾಗಿಲ್ಲ. ಮಳೆ ಬಂದಾಗ ಮರ ಬಿದ್ದು ವಿದ್ಯುತ್ ತೊಂದರೆ ಉಂಟಾದರೆ ತತಕ್ಷಣ ಸರಿಪಡಿಸಿ ವಿದ್ಯುತ್ ಸಂಪರ್ಕ ನೀಡಲಾಗುವುದು. 16 ಲಕ್ಷ ಕಿಲೋ ಮೀಟರ್ ವಿದ್ಯುತ್ ತಂತಿಗಳು ರಾಜ್ಯದಲ್ಲಿ ಇದೆ ಎಂದರು.
ಎಂ.ಇ.ಐ.ಸಂಸ್ಥೆ ಅವರಣದಲ್ಲಿ ವಿದ್ಯುತ್ ಪರಿವರ್ತಕ (ಟ್ರಾನ್ಸಫಾರ್ಮರ್) ದುರಸ್ತಿ ಘಟಕ ಆರಂಭಿಸಲಾಗುತ್ತಿದೆ. ಇದರಿಂದ ಕೋಟ್ಯಂತರ ರೂಪಾಯಿ ಸರ್ಕಾರಕ್ಕೆ ಉಳಿತಾಯವಾಗಲಿದೆ. ವಿದ್ಯುತ್ ಪರಿವರ್ತಕಗಳನ್ನು ಸರ್ಕಾರಿ ಖರೀದಿ ಜೊತೆಯಲ್ಲಿ ಖಾಸಗಿಯವರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.



