ಬೆಂಗಳೂರು: ದುಬಾರಿ ಬಡ್ಡಿಗೆ ಸಾಲ ನೀಡಿ ಜನಸಾಮಾನ್ಯರನ್ನು ಶೋಷಿಸುತ್ತಿರುವ ಆರೋಪಕ್ಕೆ ಸಿಲುಕಿರುವ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅನಧಿಕೃತ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷ ಕಠಿಣ ಜೈಲು, 5 ಲಕ್ಷ ರೂ. ದಂಡ, ಕಪ್ಪುಹಣಕ್ಕೆ ಕಡಿವಾಣ ಹಾಗೂ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸುವ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025ಕ್ಕೆ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಈ ವಿಧೇಯಕಕ್ಕೆ ಸುದೀರ್ಘ ಚರ್ಚೆಯ ಬಳಿಕ ವಿಪಕ್ಷಗಳ ಸಲಹೆ ಹಾಗೂ ಸಹಮತದಿಂದ ಅನುಮೋದನೆ ಸಿಕ್ಕಿದೆ.
ವಿಧೇಯಕ ಮಂಡಿಸಿ ಮಾತನಾಡಿದ ಎಚ್ ಕೆ ಪಾಟೀಲ್, ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿದಾರರಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಈ ವಿಧೇಯಕ ತರಲಾಗಿದೆ ಎಂದರು.
ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ. ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ. ಸಾಲಗಾರನಿಗೆ ಕೆಲವೊಮ್ಮೆ ಹೆಚ್ಚಿನ ಬಡ್ಡಿ ಪಾವತಿಸಲು ಒತ್ತಾಯಿಸಲಾಗುತ್ತಿದೆ. ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ಪೊಲೀಸರಿಗೆ ಇನ್ನಷ್ಟು ಬಲ ನೀಡಿ ಕಾನೂನು ರಕ್ಷಣೆ ಮಾಡಬಹುದಾಗಿದೆ ಎಂದರು.
ಕಾಯ್ದೆ ಬೆಂಬಲಿಸಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಈಗಾಗಲೇ ಇರುವ ಕಾನೂನುಗಳ ಮೂಲಕ ಫೈನಾನ್ಸ್ ದಂಧೆ ಮಾಡುವವರನ್ನು ಬಗ್ಗುಬಡಿಯಬಹುದಾಗಿತ್ತು. ಆದರೆ, ಸರ್ಕಾರ ಈಗಾಗಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದ ಬಡಜನರ ಪ್ರಾಣವೂ ನಷ್ಟವಾಯಿತು. ಅಂದಾಜಿನ ಪ್ರಕಾರ, ರಾಜ್ಯದಲ್ಲಿ ಲೇವಾದೇವಿದಾರರ ಕಿರುಕುಳಕ್ಕೆ 30 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಕಾನೂನು ಜಾರಿಗೆ ಹೊರಟಿದೆ. ಇದಕ್ಕೆ ನಮ್ಮ ಸ್ವಾಗತವಿದೆ. ಆದರೆ, ಯಾವುದೇ ಕಾರಣಕ್ಕೂ ಕೋರ್ಟಿನಲ್ಲಿ ಬೀಳದಂತೆ ನೋಡಿಕೊಳ್ಳಬೇಕು. ಜೊತೆಗೆ, ನ್ಯಾಯಯುತವಾಗಿ ಸಾಲ ನೀಡುವ ಮಂದಿಗೂ ಹಾನಿಯಾಗದಂತೆ ಸರ್ಕಾರ ಗಮನ ನೀಡಬೇಕು ಎಂದೂ ಸಲಹೆ ಇತ್ತರು.
ಕಾಯ್ದೆ ಬೆಂಬಲಿಸಿ ಕಾಂಗ್ರೆಸ್ಸಿನ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಮಾತನಾಡಿದರು. ನಂತರ ಧ್ವನಿ ಮತದ ಮೂಲಕ ಮಸೂದೆ ಅಂಗಿಕಾರಗೊಂಡಿತು.
ಕಾನೂನು ಚೌಕಟ್ಟುಗಳವರೆಗೆ ಕಾರ್ಯಾಚರಣೆಗೆ ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು, ಆರ್ಬಿಐನ ಕಣ್ತಪ್ಪಿಗೆ ಒಳಪಡದೇ, ನೋಂದಾಯಿತವಲ್ಲದ ಮತ್ತು ಅನಿಯಂತ್ರಿತ ಲೇವಾದೇವಿದಾರರಿಗೆ ಈ ವಿಧೇಯಕ ಅನ್ವಯವಾಗಲಿದೆ. ಕಾನೂನುಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ. ಆದರೆ, ಬಲವಂತದ ವಸೂಲಾತಿಗಳನ್ನು ನಿರ್ಬಂಧಿಸುತ್ತದೆ. ಬಲವಂತದ ಹಾಗೂ ಅಮಾನವೀಯ ಸಾಲ ವಸೂಲಾತಿಯಲ್ಲಿ ತಪ್ಪಿತಸ್ಥರಿಗೆ 10 ವರ್ಷಗಳಿಗೆ ವಿಸ್ತರಿಸಬಹುದಾದ ಜೈಲುವಾಸ, 5 ಲಕ್ಷ ರೂ.ವರೆಗೆ ವಿಸ್ತರಿಸಬಹುದಾದ ದಂಡವನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅಧ್ಯಾದೇಶದ ಮೂಲಕ ಜಾರಿ ಮಾಡಿದ್ದ ಕಾನೂನನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ
ಗಿರವಿದಾರರ ತಿದ್ದುಪಡಿ ವಿಧೇಯಕ: ಇದೇ ವೇಳೆ ಲೈಸೆನ್ಸ್ ಯುಕ್ತ ಗಿರವಿದಾರ ಮತ್ತು ಲೈಸೆನ್ಸ್ ರಹಿತ ಗಿರವಿದಾರರು ನೀಡುವ ದುಬಾರಿ ಬಡ್ಡಿದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳನ್ನು ಹಾಗೂ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ ಗಿರವಿದಾರರ ತಿದ್ದುಪಡಿ ವಿಧೇಯಕ ಕೂಡ ಧ್ವನಿ ಮತದ ಮೂಲಕ ಅನುಮೋದನೆಗೊಂಡಿತು.
ಅನುಮೋದನೆ ಕೋರಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗಿರವಿದಾರರ ತಿದ್ದುಪಡಿ ವಿಧೇಯಕದಲ್ಲಿ ಬಲವಂತದ ವಸೂಲಿಗೆ ತೊಂದರೆ ಕೊಡುವುದನ್ನು ನಿಷೇಧಿಸಲಾಗಿದೆ. 1 ಸಾವಿರ ದಂಡ ಇರುವುದನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. 6 ತಿಂಗಳ ಶಿಕ್ಷೆಯನ್ನು 10 ವರ್ಷಗಳಿಗೆ ಹೆಚ್ಚಿಸಲಾಗಿದೆ. 1 ತಿಂಗಳು ಎಂಬುದರ ಬದಲಾಗಿ 3 ವರ್ಷ ಎಂದು ತಿದ್ದುಪಡಿ ಮಾಡಲಾಗಿದೆ ಎಂದರು.
ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ತಿದ್ದುಪಡಿಯ ವಿಧೇಯಕವು ಮೈಕ್ರೋ ಫೈನಾನ್ಸ್ ಕಾಯ್ದೆಯಲ್ಲಿನ ಶಿಕ್ಷೆ ಪ್ರಮಾಣವನ್ನೇ ಒಳಗೊಂಡಿರುತ್ತದೆ ಎಂದರು.
ಲೇವಾದೇವಿದಾರರ ತಿದ್ದುಪಡಿ ವಿಧೇಯಕ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಮಾತ್ರ ಇದ್ದ ಅಧಿಕಾರವನ್ನು ಇತರೆ ಇಲಾಖೆಗಳಿಗೂ ಅವಕಾಶ ನೀಡಲಾಗಿದೆ. ಓಂಬುಡ್ಸನ್ ನೇಮಕಕ್ಕೂ ಅವಕಾಶವಿದೆ. ಕುಂದುಕೊರತೆಗೆ ಕುಂದು ಕೊರತೆ ನಿವಾರಣಾ ಘಟಕ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.




