ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ದೌರ್ಜನ್ಯವೆಸಗುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಟ್ಟಪ್ಪಣೆ ಮಾಡಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿ ಹಾಗೂ ಸಾಲ ಕೊಟ್ಟವರ ರಕ್ಷಣೆಗೆ ಸ್ಪಷ್ಟ ನಿಯಮಾವಳಿಗಳಿವೆ. ಆದರೆ ಅವು ಸಾಲುತ್ತಿಲ್ಲ ಎಂಬ ಟೀಕೆಗಳು ಇವೆ. ಇದರ ಬಗ್ಗೆ ಕಾನೂನಿನ ತಿದ್ದುಪಡಿಯ ಪರಿಶೀಲನೆ ನಡೆಸಲಾಗುವುದು ಎಂದರು.
ಸಾಲ ಕೊಡುವಾಗ ಹಲವು ಕಡೆ ಸಹಿ ಮಾಡಲಾಗಿರುತ್ತದೆ. ಅಷ್ಟು ಸಹಿಗಳನ್ನು ಏಕೆ ಮಾಡಲಾಗಿದೆ ಎಂದು ಸಾಲ ತೆಗೆದುಕೊಳ್ಳುವವರಿಗೆ ತಿಳಿದಿರುವುದಿಲ್ಲ. ಸಾಲ ಕೊಡುವವರು ಕೆಲವು ಆಸ್ತಿಗಳನ್ನು ಅಡಮಾನ ಮಾಡಿಕೊಂಡಿರುತ್ತಾರೆ. ಅದರ ಮೇಲೆ ಮನೆಗಳ ಮೇಲೆ ದಾಳಿ ಹಾಗೂ ಜಪ್ತಿ ಮಾಡುವುದು ಮುಂತಾದ ಕ್ರಮಗಳನ್ನು ಕೈಗೊಳ್ಳುತ್ತಾರೆ. ಇದಕ್ಕೆ ಕಾನೂನು ಮೂಲಕವೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಅದಕ್ಕಾಗಿ ಈಗಾಗಲೇ ಕಾನೂನು ಸಚಿವರು ಅಗತ್ಯ ತಿದ್ದುಪಡಿಗೆ ಮುಂದಾಗಿದ್ದಾರೆ ಎಂದರು.
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ನಿಂದ ಕಿರುಕುಳವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಂತೂ ಬಂದಿವೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿಯವರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಯಾವ ರೀತಿಯ ಪ್ರಕರಣಗಳು ದಾಖಲಾಗಿವೆ, ಎಷ್ಟು ಕಿರುಕುಳ ಪ್ರಕರಣಗಳಿವೆ, ಕಾನೂನು ಬದಲಾವಣೆ ಯಾವ ರೀತಿ ಆಗಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.




