ಬೆಳಗಾವಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಉತ್ತೇಜಿಸಲು ಜಾರಿಗೊಳಿಸಿರುವ ಮಧ್ಯಾಹ್ನ ಬಿಸಿಯೂಟ, ಸಮವಸ್ತ್ರ, ಶೂ ಸೇರಿದಂತೆ ಇತರೆ ಸೌಲಭ್ಯಗಳನ್ನು ರಾಜ್ಯದ ಗಡಿ ಪ್ರದೇಶದಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹಾರಾಷ್ಟ್ರ, ನೆರೆ ರಾಜ್ಯಗಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಈ ಯೋಜನೆಗಳನ್ನು ಜಾರಿಗೊಳಿಸಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಮಹಾರಾಷ್ಟ್ರ ಸರ್ಕಾರ ಇದನ್ನು ಮಾಡಿದರೆ ಒಳ್ಳೆಯದು. ನಾವು ಒಬ್ಬರಿಗೆ ಕೊಡೋದು ಎಷ್ಟು ಸರಿ ಎನ್ನುವುದು ಯೋಚಿಸಿ ನೋಡಬೇಕು. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವೆ. ಮಕ್ಕಳಿಗೆ ಶೂಗಳನ್ನು ಕೊಡುವುದು ಒಳ್ಳೆಯದು. ನಮ್ಮಿಂದ ಏನೂ ತೊಂದರೆಯಾಗುವುದಿಲ್ಲ ಅಂತಾದರೆ ನಾವು ಆ ಮಕ್ಕಳಿಗೆ ಶೂ ಹಾಗೂ ವಿವಿಧ ಯೋಜನೆಗಳನ್ನು ವಿತರಣೆ ಮಾಡುತ್ತೇವೆ ಎಂದರು.




