ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬರೆ ಹಾಕಲು ವೇದಿಕೆ ಸಜ್ಜಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹಾಲು ಉತ್ಪಾದಕರ ಬೇಡಿಕೆ ಹಾಗೂ ಗ್ರಾಹಕರ ಹಿತ ರಕ್ಷಣೆಯನ್ನು ಗಮನಕ್ಕೆ ತೆಗೆದುಕೊಂಡು ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ವಿಧಾನಪರಿಷತ್ ನಲ್ಲಿ ಪ್ರಕಟಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ಸಿನ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯದಲ್ಲಿಯೇ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು. ಈ ವೇಳೆ ರೈತರು ಮತ್ತು ಗ್ರಾಹಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದರು.
ಹಾಲು ಖರೀದಿ ದರ ಹೆಚ್ಚಿಸುವ ಸಂಬಂಧ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಾಲು ಮಹಾಮಂಡಳದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜೊತೆ ಒಂದು ಸುತ್ತಿನ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.
ಹಾಲಿನ ದರ, ಹಾಲಿನ ಖರೀದಿದರವನ್ನು ಹೆಚ್ಚಿಸುವ ಸಂಬಂಧ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮವಾಗಿ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸಾಮಾನ್ಯ ವರ್ಗದ ಹಾಲು ಉತ್ಪಾದಕರಿಗೆ ಕಳೆದ 5 ತಿಂಗಳು ಪರಿಶಿಷ್ಟ ಜಾತಿಯ ಹಾಲು ಉತ್ಪಾದಕರಿಗೆ 2 ತಿಂಗಳು ಮತ್ತು ಪರಿಶಿಷ್ಟ ಪಂಗಡದ ಹಾಲು ಉತ್ಪಾದಕರಿಗೆ 4 ತಿಂಗಳುಗಳ ಸಹಾಯಧನ ನೀಡುವುದು ಬಾಕಿ ಇದೆ. ಈ ವಿಳಂಬದಿಂದ ರೈತರು ಸಂಕಷ್ಟದಲ್ಲಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.
ಪ್ರೋತ್ಸಾಹಧನ ನೀಡಲು ಹೆಚ್ಚುವರಿ ಅನುದಾನ ಅವಶ್ಯವಿದ್ದು ಅನುದಾನ ಬಿಡುಗಡೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ. ಅನುದಾನ ಬಿಡುಗಡೆಯಾದ ಕೂಡಲೇ ಬಾಕಿ ಬಿಡುಗಡೆ ಮಾಡಲಾಗುವುದು ಎಂದರು.



