ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು.




