ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 27ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (RESUME) ಗಳೊಂದಿಗೆ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619 ಗೆ ಸಂಪರ್ಕಿಬಹುದು.




