ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳು ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಕರಣದ ಬಗ್ಗೆ ಈಗಾಗಲೇ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದಿದ್ದಾರೆ.
ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದಿದ್ದಾರೆ.




