ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಟಿ ರವಿಯವರು ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ ಎಂದರು.
ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.




