ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ 17 ತಿಂಗಳಲ್ಲಿ 17 ಅವಾಂತರಗಳನ್ನು ಮಾಡಿಕೊಂಡಿದೆ. ಇಡೀ ಸರ್ಕಾರ ನಿದ್ದೆಗೆ ಜಾರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನೀಡಿದ್ದ ರೀತಿಯ ಆಡಳಿತ ಈ ಬಾರಿ ನೀಡುತ್ತಿಲ್ಲ. ಸಿಎಂ ಮುಡಾ ಕೇಸ್‌ನಲ್ಲಿ ನರಳುತ್ತಿದ್ದರೆ, ಸರ್ಕಾರ ನಿದ್ದೆ ಮಾಡುತ್ತಿದೆ ಎಂದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬೆಳಗಾವಿಯೊಂದರಲ್ಲೇ 325 ಮಕ್ಕಳು ಮೃತರಾಗಿದ್ದಾರೆ. ಯಾವ ಇಲಾಖೆಯ ಮೇಲೆಯೂ ಸಿಎಂಗೆ ಹಿಡಿತ ಇಲ್ಲ. ಬಾಣಂತಿಯರು, ಮಕ್ಕಳು ಸಾಯುತ್ತಿದ್ದರೂ ಸರ್ಕಾರ ನಿದ್ದೆಗೆ ಜಾರಿದೆ ಎಂದರು.
ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಸರ್ಕಾರ 17 ತಿಂಗಳಲ್ಲಿ 17 ಅವಾಂತರಗಳನ್ನು ಮಾಡಿಕೊಂಡಿದೆ. ಅಭಿವೃದ್ದಿ ಕಾರ್ಯ ಮರೆತಿರುವುದು, ವಕ್ಫ್ ಅವಾಂತರ, ಬಾಣಂತಿಯರ ಸಾವು, ಲಿಕ್ಕರ್ ಹಗರಣದ ಜೊತೆ ಈಗ ಮೆಡಿಕಲ್ ಮಾಫಿಯಾ ಸೇರಿಕೊಂಡಿದ್ದು ಎಲ್ಲ ವಿಚಾರಗಳನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.
ಸಿಎಂಗೆ ಇಲಾಖೆಯ ಮೇಲೆ ಹಿಡಿತ ಕೈ ತಪ್ಪಿದ ಕಾರಣದಿಂದ ಎಲ್ಲ ಇಲಾಖೆಗಳಲ್ಲಿ ಅನಾಹುತವಾಗುತ್ತಿದೆ. ಎಲ್ಲ ಸಚಿವರು ಹಣ ಮಾಡುವುದರಲ್ಲಿ ನಿರತರಾಗಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಇದು ಗುರುವಾರದ ಸರ್ಕಾರವಾಗಿದೆ. ಹಣ ಮಾಡಲು ಮಾತ್ರ ಸಚಿವರು ಗುರುವಾರ ವಿಧಾನಸೌಧಕ್ಕೆ ಆಗಮಿಸುತ್ತಾರೆ. ಹೊಸದಾಗಿ ಬಂದಾಗ ಧರ್ಮ ದರ್ಶನ ಮಾಡುತ್ತೇವೆ, ಜನಸಂಪರ್ಕ ಮಾಡುತ್ತೇವೆ ಎಂದು ಹೇಳಿದ್ದ ಮಾತನ್ನು ಮರೆತು ಹಣ ಮಾಡುವುದರಲ್ಲಿ ಇಡೀ ಸರ್ಕಾರ ನಿರತವಾಗಿದೆ ಎಂದು ಆರೋಪಿಸಿದರು.
ಉತ್ತರ ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಾ?: ಉತ್ತರ ಕರ್ನಾಟಕ ಅಭಿವೃದ್ದಿಗೆ ಹಿಂದೆ ಹೇಳಿದ್ದೇನು? ಈಗ ಮಾಡುತ್ತಿರುವುದೇನು? ಈ ವಿಚಾರವನ್ನು ಸಹ ನಾವು ಪ್ರಸ್ತಾಪ ಮಾಡಲಿದ್ದೇವೆ. ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದು ಹೇಳಿದ್ದವರು ಎಲ್ಲಿ ಹೋದರು? ಕರ್ನಾಟಕದ ಇತಿಹಾಸದಲ್ಲೇ ಈ ಸರ್ಕಾರ ಅತ್ಯಂತ ಕಳಪೆ ಎಂದರು.




