ಬೆಂಗಳೂರು: ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಮನೆ, ಜನಜಾನುವಾರುಗಳು ನೀರಿನಲ್ಲಿ ಮುಳುಗುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಮಾತ್ರ ಹಗರಣಗಳಲ್ಲಿ ಮುಳುಗಿದೆ. ಮಂತ್ರಿಗಳು ನಾಪತ್ತೆಯಾಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
ಭಾರಿ ಮಳೆಯಿಂದ ಕರಾವಳಿ, ಮಲೆನಾಡು, ಬಯಲುಸೀಮೆಯ ಜಿಲ್ಲೆಗಳಲ್ಲಿ ಗುಡ್ಡ ಕುಸಿತ, ಸೇತುವೆಗಳ ಮುಳುಗಡೆ, ಮನೆಗಳ ಕುಸಿತದಿಂದ ಜೀವ ಹಾನಿಯಾಗಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಊಟ, ವಸತಿಯಿಲ್ಲದೇ ನರಕ ಅನುಭವಿಸುತ್ತಿದ್ದಾರೆ. ಆದರೆ, ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿ, ಸಾಂತ್ವನ, ಪರಿಹಾರ ಒದಗಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದಿದೆ.
ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಮಂತ್ರಿಗಳು ತಮ್ಮ ಅಕ್ರಮಗಳನ್ನು ಮುಚ್ಚಿಕೊಳ್ಳುವಲ್ಲೇ ಬ್ಯುಸಿಯಾಗಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನಡು ನೀರಿನಲ್ಲೇ ‘ಕೈ’ಬಿಟ್ಟಿರುವ ಸರ್ಕಾರಕ್ಕೆ ನೊಂದವರ, ನಿರಾಶ್ರಿತರ ಕಣ್ಣೀರು ಶಾಪವಾಗದೆ ಬಿಡದು’ ಎಂದಿದೆ.




