ಪ್ರೊ.ನರೇಂದ್ರ ನಾಯಕ್ ಅವರಿಂದ ಪವಾಡ ರಹಸ್ಯ ಬಯಲು ಕಾರ್ಯಕ್ರಮ

2 years ago

ಬೆಂಗಳೂರು: ಕನ್ನಡ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಸಂಘ ಕನ್ನಡ ಸಂಶೋಧನಾ ವಿದ್ಯಾರ್ಥಿಗಳ ವಿಚಾರ ವೇದಿಕೆ, ಜ್ಞಾನಭಾರತಿ ನೇಗಿಲಯೋಗಿ ಟ್ರಸ್ಟ್, ಬೆಂಗಳೂರು ವತಿಯಿಂದ ಪವಾಡ ರಹಸ್ಯ ಬಯಲು ಕಾರ್ಯಕ್ರಮವನ್ನು 07 – ಮಾರ್ಚ್ – 2024ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಎಚ್.ಎನ್.ಸಭಾಂಗಣದಲ್ಲಿ ಆಯೋಜಿಸಲಾಗಿದೆ.

“ವೈಜ್ಞಾನಿಕ ಮನೋಭಾವ: ಪ್ರಾತ್ಯಕ್ಷಿಕೆ” ಕಾರ್ಯಕ್ರಮವನ್ನು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ (FIRA) ದ ಅಧ್ಯಕ್ಷರಾದ ಪ್ರೊ.ನರೇಂದ್ರ ನಾಯಕ್ ಅವರು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಡಾಮಿನಿಕ್, ನಿರ್ದೇಶಕರು, ಕನ್ನಡ ಅಧ್ಯಯನ ಕೇಂದ್ರ, ಬೆಂಗಳೂರು ವಿಶ್ವವಿದ್ಯಾಲಯ ಅವರು ವಹಿಸುವರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ವಿಚಾರವಾದಿಗಳಾದ ಡಾ.ಎಚ್.ಆರ್.ಸ್ವಾಮಿ ಅವರು ಆಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳ ಅಧ್ಯಾಪಕರು ಹಾಜರಿರಲಿದ್ದಾರೆ.

ವಿಶ್ವವಿದ್ಯಾಲಯದ ಇತಿಹಾಸ ವಿಭಾಗ, ರಾಜ್ಯಶಾಸ್ತ್ರ ವಿಭಾಗ, ಶಿಕ್ಷಣ ವಿಭಾಗ, ಸಮಾಜಶಾಸ್ತ್ರ ವಿಭಾಗಗಳು ಸಹಕಾರ ನೀಡಿವೆ.

Leave a Reply