ಏಡ್ಸ್ ಬಗ್ಗೆ ತಪ್ಪು ಕಲ್ಪನೆ ಹೋಗಲಾಡಿಸಬೇಕು: ಸಂತೋಷ ಎಂ.ಎಸ್

1 year ago

ಶಿವಮೊಗ್ಗ: ಸಮಾಜದಲ್ಲಿ ಹೆಚ್.ಐ.ವಿ ಕಾಯಿಲೆ ಬಗ್ಗೆ ತಪ್ಪು ಕಲ್ಪನೆಗಳಿವೆ, ಆದ್ದರಿಂದ ಹೆಚ್.ಐ.ವಿ ಸೊಂಕಿತರನ್ನು ಸಾಮಾಜಿಕ ಬಹಿಷ್ಕಾರ ಮಾಡುವ ಅಥವಾ ಅಸಹ್ಯ ರೀತಿಯಲ್ಲಿ ನೋಡುವುದನ್ನು ನಿಲ್ಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಂ.ಎಸ್ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುಬ್ಬಯ್ಯ ನರ್ಸಿಂಗ್ ಕಾಲೇಜು, ನ್ಯಾಷನಲ್ ಲಾ ಕಾಲೇಜು, ಎಪ್.ಫಿ.ಎ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಕೋರ್ಟ್ ಆವರಣದಿಂದ ಭಾರತೀಯ ವೈದ್ಯಕೀಯ ಸಂಘದವರಗೆ ಜಾಥಾ ಕಾರ್ಯಕ್ರಮವನ್ನು ಗೌರವಾನಿತ್ವ ಪ್ರಧಾನ ಜಿಲ್ಲಾ ಮತ್ತು ಸತ್ರಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾ. ಸಂತೋಷ ಎಂ.ಎಸ್, ಏಡ್ಸ್ ಕಾಯಿಲೆ ಆಹಾರ ಹಂಚಿಕೆ ಮಾಡಿಕೊಳ್ಳುವುದಾಗಲೀ ಅಥವಾ ಮುಟ್ಟುವಿಕೆಯಿಂದಾಗಲೀ ಬರುವುದಿಲ್ಲ. ಅಸುರಕ್ಷಿತ ಲೈಂಗಿಕ ಚಟುವಟಿಯಿಂದ ಬರುವುದು ಎಂದರು.

ಜನರು ತಮ್ಮ ಕಾಯಿಲೆಯ ಬಗ್ಗೆ ಮುಕ್ತವಾಗಿ ಹೇಳಿಕೊಳ್ಳುವ ವಾತಾವರಣ ಸೃಷ್ಠಿಯಾಗಬೇಕು. ಹೆಚ್.ಐ.ವಿ ಬಗ್ಗೆ ಒಂದು ಕಾಯ್ದೆಯೇ ಇದೆ. ಈ ಕಾಯ್ದೆ ರೋಗಿಯ ಬಗ್ಗೆ ಅಪಪ್ರಚಾರ ಮಾಡುವುದು, ರೋಗಿಯ ಅನುಮತಿ ಇಲ್ಲದೆ ಮತ್ತೊಬ್ಬರಿಗೆ ಹೇಳುವುದು ಕಾನೂನಾತ್ಮಕವಾಗಿ ಶಿಕ್ಷಾರ್ಹ ಅಪರಾಧ. ಕಾನೂನಿನ ಉಲ್ಲಂಘನೆಯಾದಲ್ಲಿ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷಕ್ಕೂ ಮೀರಿದ ದಂಡ ವಿಧಿಸಲಾಗುವುದು ಎಂದರು.

ವಿದ್ಯಾರ್ಥಿಗಳು ಏಡ್ಸ್ ಬಗ್ಗೆ ತಿಳಿದುಕೊಂಡು ಸಾರ್ವಜನಿಕರಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಜಿಲ್ಲೆಯಲ್ಲಿ ಹೆಚ್.ಐ.ವಿ ಪರೀಕ್ಷೆಗೆ ಹೆಚ್ಚು ಜನರು ಒಳಗಾಗುತ್ತಿರುವುದು ಒಳ್ಳೆಯ ಬೆಳವಣಿಗೆಯ ನೋಟವನ್ನು ತೋರುತ್ತದೆ. ಹೆಚ್.ಐ.ವಿ ಪರೀಕ್ಷೆ ಮಾಡಿದರೆ ಅದು ಏಡ್ಸ್ ಇದೆ ಎಂದು ಅರ್ಥ ಅಲ್ಲ, ಸಾರ್ವಜನಿಕರ ಹಿತ ದೃಷ್ಠಿಯಿಂದ ಮಾಡಲಾಗುತ್ತದೆ. ಏಡ್ಸ್ ಕಾಯಿಲೆ ಬಗ್ಗೆ ಸಾರ್ವಜನಿಕರು ಹೆಚ್ಚು ಅರಿವು ಮೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಯುವಜನರಿಗೆ ಒಂದು ಸಂದೇಶ ನೀಡಿದರೆ ಅದು ಎಲ್ಲರಿಗೂ ತಲುಪುತ್ತದೆ. ಅದೆ ರೀತಿ ವಿದ್ಯಾರ್ಥಿಗಳಾದ ನೀವುಗಳು ನಿಮ್ಮ ಸುತ್ತಮುತ್ತಲಿನ ಸಾರ್ವಜನಿಕರಿಗೆ, ಸ್ನೇಹಿತರಿಗೆ ಹೆಚ್.ಐ.ವಿ ಬಗ್ಗೆ ಮಾಹಿತಿಯನ್ನು ನೀಡಿ ಅರಿವು ಮೂಡಿಸಬೇಕಾಗುತ್ತದೆ. ಸರ್ಕಾರ ಸೌಲಭ್ಯಗಳನ್ನು ಬಳಸಿಕೊಂಡು ಅರೋಗ್ಯದ ಬಗ್ಗೆ ಜಾಗೃತಿವಹಿಸಿ ಎಂದರು.

ಜಿಲ್ಲಾ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಶ್ರೀಧರ್ ಮಾತನಾಡಿ, ಭಾರತ ಸಧೃಡ ಮತ್ತು ಅಭಿವೃದ್ಧಿ ಹೊಂದಲು ಎಲ್ಲರೂ ಆರೋಗ್ಯವಾಗಿರಬೇಕು. ಸರ್ಕಾರಗಳು ಏಡ್ಸ್ ರೋಗಗಳಂತಹ ಕಾಯಿಲೆಗಳ ಬಗ್ಗೆ ಹೆಚ್ಚು ಅರಿವು ಮತ್ತು ಪ್ರಚಾರ ಮಾಡುತ್ತವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂಶೋಧನೆ ಮತ್ತು ಕೌಶಲ್ಯಗಳ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳು ಎಲ್ಲಾ ಸಮುದಾಯಗಳಿಗೂ ತಲುಪುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮತ್ತು ಮಾಹಿತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಏಡ್ಸ್ ಕುರಿತು ಜಾಗೃತಿ ನೀಡುತ್ತಿರುವ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರುಗಳು, ಹೆಚ್.ಐ.ವಿ. ಪರೀಕ್ಷಕರು ಹಾಗೂ ಈ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸಿ ಪ್ರಶಸ್ತಿ ಪಡೆದವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ, ಜಿಲ್ಲಾ ಕ್ಷಯ ಮತ್ತು ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಬಿ.ಪಿ., ಎಫ್.ಬಿ.ಐ ಶಿವಮೊಗ್ಗದ ಡಾ. ಸಾದ್ವಿಕ್, ಎ.ಕೆ.ಆರ್ ಆಡಳಿತಾಧಿಕಾರಿ ರವಿಕುಮಾರ್, ಸರ್ಕಾರಿ ಅಧಿಕಾರಿ, ಸುಬ್ಬಯ್ಯ ನರ್ಸಿಂಗ್ ಕಾಲೇಜು ಮತ್ತು ನ್ಯಾಷನಲ್ ಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply