ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ( ಗ್ಯಾರಂಟಿ ಯೋಜನೆಗಳನ್ನು) ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಗ್ಯಾರಂಟಿ ಯೋಜನೆಗಳನ್ನು ಅಬಾಧಿತವಾಗಿ ಮುಂದುವರೆಸಲಾಗುತ್ತದೆ ಎಂದು ಘೋಷಿಸಿದರು.
ಗ್ಯಾರೆಂಟಿಗಳು ಮುಂದುವರೆಯುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಅವರೇನು ಶಾಸ್ತ್ರ ಹೇಳುತ್ತಾರಾ ಎಂದು ಕಿಡಿ ಕಾರಿದ ಅವರು, ಈಗಷ್ಟೇ ಅಲ್ಲ ಮುಂದಿನ ಅವಧಿಗೂ ನಾವೇ ಆಯ್ಕೆಯಾಗಿ ಬರುತ್ತೇವೆ. ಆಗಲು ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.




