ಸುನಿಲ್ ಕುಮಾರ್ ಬಜಾಲ್ ಆಕ್ರೋಶ
ಮಂಗಳೂರು: ನಗರದ ಬೀದಿ ವ್ಯಾಪಾರ ವಲಯ ಶಾಸಕ ವೇದವ್ಯಾಸ ಕಾಮತ್ ಬೀದಿ ವ್ಯಾಪಾರಿಗಳಿಗೆ ಮುಂಗೈಗೆ ಬೆಲ್ಲ ಹಚ್ಚಿ ಬಡ ಬೀದಿ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡಿದ್ದಾರೆ. ಬೀದಿ ವ್ಯಾಪಾರ ವಲಯ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಗರದ ಬೀದಿ ವ್ಯಾಪಾರ ವಲಯದ ಎದುರು ಅವೈಜ್ಞಾನಿಕ, ಅಸುರಕ್ಷಿತ ಮತ್ತು ಅಸಮರ್ಪಕ ಬೀದಿ ವ್ಯಾಪಾರ ವಲಯದಲ್ಲಿ ವ್ಯಾಪಾರ ಮಾಡಲು ಬಲವಂತ ಮಾಡುತ್ತಿರುವ ನಗರ ಪಾಲಿಕೆ ಅಧಿಕಾರಿಗಳ ದಬ್ಬಾಳಿಕೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಬೀದಿ ವ್ಯಾಪಾರಿಗಳ ಹೋರಾಟ ಹತ್ತಿಕ್ಕಲಿಕ್ಕಾಗಿ ಬೀದಿ ವ್ಯಾಪಾರಿಗಳ ಐಕ್ಯತೆಯನ್ನು ಒಡೆದು ಅವರನ್ನು ಅತಂತ್ರಗೊಳಿಸಿ ಬಡ ಬೀದಿ ವ್ಯಾಪಾರಿಗಳನ್ನು ಸಂಕಷ್ಟಕ್ಕೆ ತಳ್ಳುವುದೇ ಶಾಸಕ ಕಾಮತ್ ಅವರ ಸಾಧನೆ. ಅವರು ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಣೆ ಮಾಡಲು ಹೋರಾಟವನ್ನು ತೀವ್ರಗೋಳಿಸುತ್ತೇವೆ ಎಂದರು.
ಸಂಘದ ಗೌರವಧ್ಯಕ್ಷ ಬಿಕೆ ಇಮ್ತಿಯಾಜ್ ಮಾತನಾಡಿ, ನಗರದ ಹೃದಯ ಭಾಗದಲ್ಲಿರುವ ಬೀದಿ ವ್ಯಾಪಾರ ನಾಲ್ಕು ವಾರ್ಡ್ ಗಳಲ್ಲಿ ಹರಡಿಕೊಂಡಿದೆ. ಕೇವಲ ಒಂದು ವಾರ್ಡಿನ ಬೀದಿ ವ್ಯಾಪಾರಿಗಳನ್ನು ವಲಯದ ಒಳಗೆ ಕಳುಹಿಸಿ ಅವರನ್ನು ನಷ್ಟಕ್ಕೆ ತಳ್ಳಿ ಬಿಜೆಪಿ ಸಾಧನೆ ಎಂದು ಬಿಂಬಿಸಲು ಹೊರಟಿದೆ ಎಂದರು.
ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಾಣಗೊಂಡಿರುವ ವ್ಯಾಪಾರ ವಲಯ ಒಂದೇ ಸೂರಿನಡಿಯಲ್ಲಿ ಹಣ್ಣು ತರಕಾರಿ ಮತ್ತು ಆಹಾರ ಮತ್ತಿತರ ವ್ಯಾಪಾರಿಗಳಿಗೆ ಪ್ರತ್ಯೇಕ ವಿಭಾಗಗಳನ್ನು ಮಾಡಿ ನಿರ್ಮಿಸಲಾಗಿದೆ. ಮಂಗಳೂರಿನ ವ್ಯಾಪಾರ ವಲಯದಲ್ಲೇ ಆಹಾರ ತಯಾರಿಸಿ ಮಾರಾಟ ಮಾಡಲು ಅವಕಾಶ ನೀಡಿರುವುದರಿಂದ ಗ್ಯಾಸ್ ಅವಘಡ ಸಂಭವಿಸಿದರೆ ಅನಾಹುತಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಐಟಿಯು ಮುಖಂಡರಾದ ಯೋಗೀಶ್ ಜಪ್ಪಿನಮೊಗರು ಮಾತನಾಡಿದರು
ಸಂಘದ ಮುಖಂಡರಾದ ವಿಜಯ ಜೈನ್, ಸಿಕಂದರ್ ಬೇಗ್, ಹಂಝ, ಶಿವಪ್ಪ, ಹಸನ್ ಕುದ್ರೋಳಿ, ರಫೀಕ್, ಮೇಬಲ್ ಡಿ ಸೋಜ, ಫೀಲೋಮಿನ, ಅಬ್ದುಲ್ ಖಾದರ್, ಹನೀಫ್ ಬೆಂಗ್ರೆ, ಗುಡ್ಡಪ್ಪ, ಮುತ್ತುರಾಜ್, ಗಂಗಮ್ಮ ಮುಂತಾದವರು ಉಪಸ್ಥಿತರಿದ್ದರು.




