ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ: ಎಸ್.ಸುರೇಶ್ ಕುಮಾರ್
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರ ಸಂಪರ್ಕ ಕಛೇರಿ ಅವರಣದಲ್ಲಿರುವ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಯ ಮುಂಭಾಗದಲ್ಲಿ ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ನಾಗರಿಕರ ಜೊತೆಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನೇರವಾಗಿ ಶಾಸಕರನ್ನು ಭೇಟಿ ಮಾಡಿ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್.ಸುರೇಶ್ ಕುಮಾರ್ ಸಾರ್ವಜನಿಕರನ್ನು ಭೇಟಿ ಮಾಡಿದರು.
ಇದೇ ವೇಳೆ ಮಾತನಾಡಿದ ಎಸ್.ಸುರೇಶ್ ಕುಮಾರ್, ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ಸಮಸ್ಯೆಗಳ ನಿರಂತರ ಸಮಸ್ಯೆ ಕೊಡಲೆ ಬಗೆಹರಿಸಬೇಕು ಮತ್ತು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಬೇಕು ಎಂದರು.
ಕುಡಿಯುವ ನೀರು, ಒಳಚರಂಡಿ ಮತ್ತು ರಸ್ತೆ ಗುಂಡಿ, ರಸ್ತೆಗಳಿಗೆ ಡಾಂಬರೀಕರಣ, ಬೀದಿ ದೀಪ, ಹೂಳು ತೆಗೆಯುವುದು, ಶ್ರೀರಾಮಪುರ ಓಲ್ಡ್ ಕೋ ಆಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಅನಧಿಕೃತ ಚಟುವಟಿಕೆಗಳ ಮತ್ತು ಒಂಟಿ ಮನೆ ಯೋಜನೆಯಲ್ಲಿ ಹಣ ಬಿಡುಗಡೆಯಾಗಿಲ್ಲ ಎಂಬ ದೂರುಗಳು ಬಂದಿದೆ. ಅಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. ಸಾರ್ವಜನಿಕರನ್ನು ನೇರ ಭೇಟಿ ಮಾಡುವದರಿಂದ ಸಮಸ್ಯೆಗಳಿಗೆ ಬೇಗನೆ ಪರಿಹಾರ ಸಿಗುತ್ತದೆ ಎಂದರು.
ಬಿಜೆಪಿ ಮಂಡಲದ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್, ಪಾಲಿಕೆ ಮಾಜಿ ಸದಸ್ಯರುಗಳಾದ ಎಮ್.ಮುನಿರಾಜು, ರಾಜಣ್ಣ, ವಿಜಯಕುಮಾರ್, ಬಿಬಿಎಂಪಿ ಇಂಜಿನಿಯರ್ ವಿಭಾಗ, ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.



