ಗ್ರಂಥ ಬಿಡುಗಡೆ ಕಾರ್ಯಕ್ರಮ
ಧಾರವಾಡ: ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ (ರಿ) ವತಿಯಿಂದ ಡಾ.ಎಂ.ಎಂ.ಕಲಬುರ್ಗಿ ಅವರ 86ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ನವೆಂಬರ್ 28, 2024 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು ಹಾಗೂ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುವರು. ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉಮಾದೇವಿ ಎಂ.ಕಲಬುರ್ಗಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ ಅತಿಥಿಗಳಾಗಿ ಭಾಗವಹಿಸುವರು.
ಡಾ.ಎಂ.ಎಂ.ಕಲಬುರ್ಗಿ ಸಂಶೋಧನ ಪ್ರಶಸ್ತಿಗೆ ಮೈಸೂರು ಹಿರಿಯ ಸಂಶೋಧಕ ಡಾ. ಎನ್.ಎಸ್. ತಾರಾನಾಥ ಹಾಗೂ ಡಾ. ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿಗೆ ಸಂಗೀತ ಉಪನ್ಯಾಸಕ ಡಾ. ಶರಣಬಸಪ್ಪ ಮೇಡೆದಾರ ಅವರು ಪುರಸ್ಕೃತರಾಗಿರುವರು.
ಕನ್ನಡ ಸಂಶೋಧನ ಮಾರ್ಗ ಸಂಪುಟ-1 ಗ್ರಂಥವನ್ನು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಜಿ.ಎಮ್.ಹೆಗಡೆ ಬಿಡುಗಡೆ ಮಾಡವರು.




