ಅನಿಲ ಸೋರಿಕೆ ಅರಿವು ಮೂಡಿಸಲು ಅಣಕು ಪ್ರದರ್ಶನ

2 years ago

#Mock #demonstration #create #gasleak #awareness

ವಿಪತ್ತು ನಿರ್ವಹಣಾ ಅಣಕು ಪ್ರದರ್ಶನಕ್ಕೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ

ಬೆಂಗಳೂರು: ಅನಿಲ ಸೋರಿಕೆಯಾದಾಗ ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕು ಹಾಗೂ ಪರಿಸ್ಥಿತಿ ನಿಬಾಯಿಸಬೇಕು ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಅಣಕು ಪ್ರದರ್ಶನವನ್ನು (Mock Drill) ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಅಣಕು ಪ್ರದರ್ಶನದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಆಯಾ ಇಲಾಖೆಗೆ ವಹಿಸಿರುವ ಜವಬ್ದಾರಿಯನ್ನು ನಿರ್ವಹಿಸಬೇಕು ಎಂದರು.

ಗೇಯಿಲ್ ಸಂಸ್ಥೆಯ (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್) ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಇವರ ಸಹಯೋಗದೊಂದಿಗೆ ನವೆಂಬರ್ 17 ರಂದು ಬೆಳಿಗ್ಗೆ 11.30ಕ್ಕೆ ಯಲಹಂಕ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮ, ಗೇಯಿಲ್ ಗ್ಯಾಸ್ ಲಿಮಿಟೆಡ್, ಕೊಕೊ ಸಿಎನ್ ಜಿ ಸ್ಟೇಷನ್ ನಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು.

ಅಣಕು ಪ್ರದರ್ಶನ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಹಾಗೂ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಕೃಷ್ಣಮೂರ್ತಿ, ಬೆಂಗಳೂರು ಉತ್ತರ ವಿಭಾಗಾಧಿಕಾರಿ ಪ್ರಮೋದ್ ಪಟ್ಟಿ, ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply