ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 9 ಮತ್ತು 10 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.


