ಸ್ಲಂ ಮಕ್ಕಳಿಗೆ ಮೋದಿ ಕನಸಿನ ಡಿಜಿಟಲ್ ಇಂಡಿಯಾ ಯೋಜನೆ ತಲುಪುಬೇಕು: ಉದಯ್ ಗರುಡಚಾರ್

4 years ago

ಸ್ಲಂ ಮಕ್ಕಳಿಗೆ ಮೋದಿ ಕನಸಿನ ಡಿಜಿಟಲ್ ಇಂಡಿಯಾ ಯೋಜನೆ ತಲುಪುಬೇಕು: ಉದಯ್ ಗರುಡಚಾರ್

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ,ಹೊಂಬೇಗೌಡನಗರ ವಾರ್ಡ್ ನಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಆನಾಥ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಟ್ಟ್ ವರ್ಕ್ ಮಾಡಲು ಅನುಕೂಲಕ್ಕೆ ಬಿಗ್-ಬಿ ಮತ್ತು ಮಣಿಪಾಲ್ ಇನ್ಸಿಟಿಟ್ಯೂಟ್ ಸಹಯೋಗದಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಆನಾಥ ಮಕ್ಕಳು ಕಾಲೇಜು, ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಕ್ಟ್ ವರ್ಕ್ ಮಾಡಲು ತರಬೇತಿ ಕೇಂದ್ರ ಉದ್ಘಾಟನೆಯನ್ನು ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್, ಅರಣ್ಯ ಅಭಿವೃದ್ದಿ ನಿಗಮ ನಿರ್ದೇಶಕಿ ಭಾಗ್ಯವತಿ ಅಮರೇಶ್, ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಮರೇಶ್, ಚಲನಚಿತ್ರ ನಿರ್ಮಾಪಕ ಜಾಕ್ ಮಂಜು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತಾಡಿದ ಉದಯ ಗರುಡಚಾರ್, ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯ ಕನಸಿನ ಭಾರತ ನನಸು ಮಾಡಲು ಪ್ರತಿ ಮನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಸ್ಲಂ ಪ್ರದೇಶಗಳಿವೆ. ಅಲ್ಲಿ ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರಿಗೆ ಉತ್ತಮ ಕಂಪ್ಯೂಟರ್ ತಂತ್ರಜ್ಞಾನ ಹೊಂದಲು ಮತ್ತು ಶಾಲಾ, ಕಾಲೇಜು ಮಕ್ಕಳ ಪ್ರಾಜೆಟ್ಟ್ ವರ್ಕ್ ಮಾಡಲು ಉಚಿತವಾಗಿ ಕಲಿಸುವುದರಿಂದ ಶ್ರೀಮಂತರ ಮಕ್ಕಳಿಗೆ ಸಿಗುವ ಕಂಪ್ಯೂಟರ್ ಶಿಕ್ಷಣ ಸ್ಲಂ ಪ್ರದೇಶದ ಮಕ್ಕಳಿಗೆ ಸಿಕ್ಕರೆ ಭಾರತ ಭವಿಷ್ಯ ಉಜ್ವಲವಾಗಲಿದೆ. ಪ್ರಧಾನಿ ನರೇಂದ್ರಮೋದಿ ಡಿಜಿಟಲ್ ಇಂಡಿಯ ಯಶ್ವಸಿಯಾಗಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ಭಾಗ್ಯವತಿ ಅಮರೇಶ್ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ದಿ ಸಾಧ್ಯ. ಆರ್ಥಿಕವಾಗಿ ಸಬಲರಾದವರಿಗೆ ಉನ್ನತ ಶಿಕ್ಷಣ ಸಿಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉಚಿತವಾಗಿ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಟ್ಟ್ ವರ್ಕ್ ಮಾಡಲು 10 ಕಂಪ್ಯೂಟರ್ ಗಳನ್ನು ಆಳವಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಆಶಯ ನಮ್ಮದು ಎಂದರು.

ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಮುಖಂಡರು, ಸ್ಲಂ ಪ್ರದೇಶದ ಮಕ್ಕಳು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Leave a Reply