ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದವರಿಗೆ ಸನ್ಮಾನ ಮಾಡಲಿದ್ದಾರೆ ಮೋದಿ

5 years ago

ದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕಗಳನ್ನ ಗೆದ್ದು ಸಾಧನೆಮೆರೆದ ಹೆಮ್ಮೆಯ ಕ್ರಿಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಜಪಾನ್ ನ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ 2020ಕ್ಕೆ ಭಾನುವಾರ ಮುಕ್ತಾಯವಾಗಿದೆ.

ಈ ಸಾರಿಯ ಒಲಿಂಪಿಕ್ಸ್ ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಗೆದ್ದುಬೀಗಿದೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಗಳಿಸಿದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನ ಮಾಡಲಿದ್ದಾರೆ. ಸಂಜೆ 6.30 ಕ್ಕೆ ದೆಹಲಿಯ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಟೋಕಿಯೊ ಒಲಿಂಪಿಕ್ಸ್ ನಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚು ಸಹಿತ 7 ಪದಕಗಳನ್ನು ಭಾರತದ ಕ್ರೀಡಾಪಟುಗಳು ಗಳಿಸಿ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನ ನಡೆಯಲಿದೆ.

Leave a Reply