ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ಮಾಡಲಾಗುತ್ತಿದೆ: ಸಂತೋಷ್ ಲಾಡ್

1 year ago

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುವುದಿಲ್ಲ. ಆದರೆ ಕೇಂದ್ರದಲ್ಲಿ ಮಾತ್ರ ನಾಯಕತ್ವ ಬದಲಾವಣೆಯಾಗುತ್ತದೆ ಕಾದು ನೋಡಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯ ಬಗ್ಗೆ ಬಿಜೆಪಿ ಸೇರಿದಂತೆ ಅನೇಕ ಪಕ್ಷಗಳಲ್ಲಿ ಸಮಾಧಾನ ಇಲ್ಲ. ಹೀಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

ತೆಲುಗುದೇಶಂ ನಾಯಕ ಚಂದ್ರ ಬಾಬು ನಾಯ್ಡು ಸೇರಿದಂತೆ ಹಲವರು ಪ್ರಧಾನಿ ಹುದ್ದೆಗೇರುವ ರೇಸ್ ನಲ್ಲಿ ಇದ್ದಾರೆ. 11 ವರ್ಷ ವಿಶ್ವಗುರು ನೋಡಿದ್ದೇವೆ. ಅವರನ್ನು ಕೆಳಗಿಳಿಸಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ ವ್ಯಂಗ್ಯವಾಗಿ ಹೇಳಿದರು.

Leave a Reply