ಬೆಂಗಳೂರು: ಚುನಾವಣೆ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫಿಕೇಷನ್ ಪ್ರಕರಣದ ಹೆಚ್.ಡಿ.ಕುಮಾರಸ್ವಾಮಿ ಕೊಡಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಾಂಗ್ರೆಸ್ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಚುನಾವಣೆ ಬಾಂಡ್ ಹಗರಣದಲ್ಲಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅರೋಪಿಯನ್ನಾಗಿ ಮಾಡಿ ತನಿಖೆ ನಡೆಸಬೇಕು ಎಂದಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಡಿಎ ಡಿನೋಟಿಫಿಕೇಷನ್ ಹಗರಣದಲ್ಲಿ ಲೋಕಾಯುಕ್ತ ತನಿಖೆ ಎದುರಿಸುತ್ತಿದ್ದಾರೆ. ನೈತಿಕ ಹೊಣೆಹೊತ್ತು ಪ್ರಧಾನಿ ನರೇಂದ್ರಮೋದಿರವರು ಸೇರಿದಂತೆ ಮೂವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಉಮೇಶ್, ಪುಟ್ಟರಾಜು, ನವೀನ್, ಹೇಮರಾಜ್, ಕೌಶಿಕ್, ವಾಸು, ಮಧು, ಗಜೇಂದ್ರ ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಎಸ್.ಮನೋಹರ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಚುನಾವಣೆ ಬಾಂಡ್ ಅಕ್ರಮದಲ್ಲಿ ಕ್ರಮಕೈಗೊಳ್ಳಬೇಕು ಎಂದು ಸುಪ್ರಿಂಕೋರ್ಟ್ ಆದೇಶ ಮಾಡಿದರು ಯಾವುದೇ ಕ್ರಮವನ್ನು ಚುನಾವಣೆ ಆಯೋಗ ಮಾಡಲಿಲ್ಲ ಎಂದರು.
ಘನ ನ್ಯಾಯಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಚುನಾವಣೆ ಬಾಂಡ್ ಪ್ರಕರಣದಲ್ಲಿ ಆರೋಪಿ ಮಾಡಿ ತನಿಖೆ ಮಾಡಬೇಕು ಎಂದು ಅದೇಶ ನೀಡಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇಬ್ಬರು ಕೇಂದ್ರ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ, ಇವರನ್ನ ರಕ್ಷಣೆ ಮಾಡುತ್ತಿರುವ ಪ್ರಧಾನಿ ನರೇಂದ್ರಮೋದಿರವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.




