ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೂ ಕೆಲ ಯುವಕರು ಮೋದಿ ಅವರ ಅಭಿಮಾನಿಗಳಾಗಿದ್ದು. ಮೋದಿ ಮೋದಿ ಎಂದು ಕೂಗುತ್ತಿರುತ್ತಾರೆ. ಅಂತವರ ಕಪಾಳಕ್ಕೆ ಬಾರಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಇಂತಹ ಹೇಳಿಕೆ ನೀಡುವ ಮೂಲಕ ಸಚಿವ ಶಿವರಾಜ್ ತಂಗಡಗಿ ಅವರು ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರೆ, ಕೊಪ್ಪಳದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿ ನಾಯಕರ ನಿಯೋಗ ಸಚಿವ ಶಿವರಾಜ ತಂಗಡಗಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.
ಮತ್ತೊಂದೆಡೆ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಸಿಟಿ ರವಿ, ಶಿವರಾಜ್ ತಂಗಡಗಿ ಅವರು ಅಪ್ಪನಿಗೆ ಹುಟ್ಟಿದ್ದರೆ ಇಂತಹ ಮಾತು ಹೇಳುತ್ತಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.




