ಮೈಸೂರು: ಬಿಜೆಪಿಯಲ್ಲಿ ಬಹಳಷ್ಟು ಜನ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣದ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ, ಅಲ್ಲಿಗೆ ಭೇಟಿಯನ್ನೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ. ಪೊನ್ನಣ್ಣನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.



