ಕರ್ನಾಟಕದ ರಾಷ್ಟ್ರೀಯ ಯುವಜನೋತ್ಸವದಲ್ಲಿ ಮೋದಿ ಭಾಗಿಯಾಗಲಿದ್ದಾರೆ: ಬೊಮ್ಮಾಯಿ

3 years ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ ಗುರುವಾರ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮ್ಮೇಳನವನ್ನು ಹುಬ್ಬಳ್ಳಿಯಲ್ಲಿ ಉದ್ಘಾಟನೆ ಮಾಡಿದರೂ ಧಾರವಾಡದ ಪ್ರಮುಖ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆಯುತ್ತಿವೆ. ಹೀಗಾಗಿ ಮೊದಲಿಗೆ ಧಾರವಾಡದ ಕರ್ನಾಟಕ ಕಾಲೇಜು, ಕರ್ನಾಟಕ ವಿವಿ, ಕೃಷಿ ವಿವಿಗೆ ಸಂಪರ್ಕ ಕಲ್ಪಿಸುವ ಒಟ್ಟು 12 ರಸ್ತೆಗಳ ಸುಧಾರಣೆ ಕಾರ್ಯ ಭರದಿಂದ ನಡೆದಿದೆ. ಜತೆಗೆ ಗಟಾರುಗಳ ಸ್ವಚ್ಛತೆ, ಕಸ ನಿರ್ವಹಣೆ ಕಾರ್ಯ ಶುರು ಮಾಡಲಾಗಿದೆ. ಮಹಾನಗರ ಪಾಲಿಕೆಯ 100 ಸಿಬ್ಬಂದಿ ಬಳಸಿಕೊಂಡು ಕಸ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲದೇ, ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

Leave a Reply