ನೀರುಹಂಚಿಕೆ ವಿವಾದ ಪರಿಹರಿಸಲು ಮೋದಿ ಭೇಟಿ: ಡಿ.ಕೆ.ಶಿವಕುಮಾರ್

3 years ago

ಬೆಂಗಳೂರು: ಕರ್ನಾಟಕ, ಮಹಾರಾಷ್ಟ್ರ, ತಮಿಳು ನಾಡು, ಆಂಧ್ರ, ತೆಲಂಗಾಣ ಮತ್ತು ಗೋವಾ ರಾಜ್ಯಗಳೊಂದಿಗಿನ ಅಂತರಾಜ್ಯ ನದಿ ವಿವಾದಗಳಿಗೆ ಸಂಬಂಧಪಟ್ಟಂತೆ ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಸಮಯಾವಕಾಶ ಕೇಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ, ಮಹದಾಯಿ, ಕೃಷ್ಣದಂತಹ ಅಂತರರಾಜ್ಯ ನದಿ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಅಗತ್ಯವಿದೆ. ಸಾಕಷ್ಟು ಬೇಡಿಕೆಗಳು ಹಾಗೂ ಸಮಸ್ಯೆಗಳು ಚಾಲ್ತಿಯಲ್ಲಿವೆ. ಅವುಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುವ ಅಗತ್ಯವಿದೆ ಎಂದರು.

ಪ್ರಧಾನಮಂತ್ರಿಯವರು ವಿದೇಶಿ ಪ್ರವಾಸದಲ್ಲಿದ್ದು ಅವರು ಸ್ವದೇಶಕ್ಕೆ ಮರಳಿದ ಬಳಿಕ ಸರ್ವಪಕ್ಷಗಳ ನಿಯೋಗದ ಭೇಟಿಗೆ ಸಮಯಾವಕಾಶ ಕೇಳಲಾಗುವುದು. ಜೊತೆಗೆ ಕೇಂದ್ರ ಕೃಷಿ, ಜಲಶಕ್ತಿ ಹಾಗೂ ಇತರ ಸಚಿವರ ಜೊತೆಗೂ ಸಮಯ ಕೇಳುವುದಾಗಿ ತಿಳಿಸಿದರು.

ಕಾವೇರಿ ನದಿ ನೀರಿನ ಹಂಚಿಕೆ ವಿಷಯವಾಗಿ ತಮಿಳುನಾಡಿನ ಮೇಲ್ಮನವಿ ಮೇರೆಗೆ ಸುಪ್ರೀಂಕೋರ್ಟ್ನಶಲ್ಲಿ ರಚನೆಯಾಗಿರುವ ತ್ರಿಸದಸ್ಯ ಪೀಠದ ಮುಂದೆ ಪ್ರಮಾಣ ಪತ್ರವನ್ನು ಇಂದು ಸಲ್ಲಿಸಲಾಗುವುದು. ನಿನ್ನೆ ರಾತ್ರಿ ಇದಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಚರ್ಚೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಇಂದು ವಕೀಲರ ತಂಡ ಸುಪ್ರೀಂಕೋರ್ಟ್ ಮುಂದೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದರು.

Leave a Reply