ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವಲ್ಲಿ ಪ್ರಬುದ್ಧರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರಾಹುಲ್ ಗಾಂಧಿಯವರ ಶಕ್ತಿ ಯೋಜನೆ ಕುರಿತ ಹೇಳಿಕೆಯನ್ನು ತಿರುಚಿ ಹೇಳಿಕೆ ನೀಡಿದ್ದ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮ ಜಾಲಾಡಿರುವ ಪ್ರಿಯಾಂಕಾ ಗಾಂಧಿ, ಜನ ಹಣದುಬ್ಬರದ ಏರಿಕೆ, ನಿರುದ್ಯೋಗ, ಆರ್ಥಿಕ ದುರಂತಗಳಿಂದ ನರಳುತ್ತಿದ್ದಾರೆ. ಯುವಕರು ನಿರಾಶೆಗೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಣದುಬ್ಬರದಿಂದ ಜನ ಮನೆ ನಡೆಸುವುದು ಕಷ್ಟಕರವಾಗಿದೆ. ನೋಟು ನಿಷೇಧ – ಜಿ.ಎಸ್.ಟಿ. ಲಕ್ಷಾಂತರ ಕೈಗಾರಿಕೆಗಳನ್ನು ಬಂದ್ ಮಾಡಿದೆ. ಆದರೆ ವಿಪಕ್ಷ ನಾಯಕರ ಹೇಳಿಕೆಯನ್ನು ತಿರುಚಿ ಜನರ ಗಮನವನ್ನು ಬೇರೆಡೆ ಸೆಳೆಯವುದು ಪ್ರಧಾನಿಯ ಆದ್ಯತೆ ಎಂದು ಕಿಡಿಕಾರಿದ್ದಾರೆ.




