ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪ್ರಯತ್ನದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಫಲಿತಾಂಶ ಹೊರ ಬಿದ್ದ ನಂತರ ಸಂಭ್ರಮಾಚರಣೆ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದರು.
ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದರು.
ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರು ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ ಎಂದು ಭಾವುಕರಾಗಿ ಹೇಳಿದರು.
ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಜನರು ಮನ್ನಣೆ ನೀಡಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವಿರತವಾಗಿ ಕೆಲಸ ಮಾಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಮತದಾರರಿಗೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿಯವರು ಕಳೆದ ಎರಡೂವರೆ ತಿಂಗಳು ಶ್ರಮವಹಿಸಿ ಗೆಲುವಿಗೆ ಶ್ರಮಿಸಿದ್ದಾರೆ. ಇಡೀ ದೇಶವನ್ನು ಸುತ್ತಿದ್ದಾರೆ. ಎನ್ ಡಿಎ ಸಾಧನೆಯಲ್ಲಿ ಅವರ ಪಾತ್ರ ದೊಡ್ಡದು ಎಂದರು.




