ಬೆಂಗಳೂರು: ರಾಜ್ಯ ವಿಧಾನಸಭೆಯ ಮೂರೂ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಚುನಾವಣಾ ಆಯೋಗ ವ್ಯಾಪಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ ಆಗ್ರಹಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರೂ ಕ್ಷೇತ್ರಗಳಲ್ಲಿ ಹಣದ ಅಬ್ಬರ ಜಾಸ್ತಿ ಆಗಿರುವುದರಿಂದ ನ್ಯಾಯಸಮ್ಮತ ಚುನಾವಣೆ ನಡೆಯುವುದು ಕಷ್ಟ. ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಅಗತ್ಯವಿರುವ ಮಾಹಿತಿ ನೀಡಲು ಸಿದ್ಧರಿದ್ದೇವೆ. ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.
ರಾಜ್ಯದಲ್ಲಿ ಆಡಳಿತ ಸೂತ್ರ ಹಿಡಿದಿರುವ ಕಾಂಗ್ರೆಸ್ ವ್ಯಾಪಕ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಆದ್ದರಿಂದ ಬಂದ ಹಣದಲ್ಲಿ ಈ ಚುನಾವಣೆ ನಡೆಸುತ್ತಿದೆ. ತಮ್ಮ ಅಭ್ಯರ್ಥಿಗಳ ಪರವಾಗಿ ಮತ ಹಾಕುವಂತೆ ಮತದಾರರಿಗೆ ದೊಡ್ಡ ಪ್ರಮಾಣದ ಹಣ ನೀಡುತ್ತಿದೆ ಎಂದು ಆರೋಪಿಸಿದರು.
ಚುನಾವಣಾ ಆಯೋಗ ನಿಗಾ ಇಡದಿದ್ದರೆ ಹಣದ ಪ್ರಭಾವದಿಂದ ಜನಸಾಮಾನ್ಯರ ತಲೆ ಹಾಳು ಮಾಡಿ ಈ ಚುನಾವಣೆಯನ್ನು ಹಣದ ಪ್ರಭಾವದ ಚುನಾವಣೆಯನ್ನಾಗಿ ಪರಿವರ್ತಿಸಲಿದ್ದಾರೆ. ಇವರ ಆಟಗಳಿಗೆ ಹೆದರುವುದಿಲ್ಲ. ಎನ್ಡಿಎ ಕಾರ್ಯಕರ್ತರು ಈ ಷಡ್ಯಂತ್ರವನ್ನು ಬಯಲಿಗೆಳೆಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳ ಭೂಗತ ಚಟುವಟಿಕೆಗಳನ್ನು ನಿಯಂತ್ರಿಸದೇ ಇದ್ದಲ್ಲಿ, ಸಾಮಾನ್ಯ ಜನರ ಮೇಲೆ ಗಂಭೀರ ಪ್ರಭಾವ ಬೀರಲಿದೆ ಎಂದರು.
ಸಂಡೂರಿನಲ್ಲಿ ಮಾಜಿ ಸಚಿವ ನಾಗೇಂದ್ರ, ಶಿಗ್ಗಾವಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಚನ್ನಪಟ್ಟಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಇವರು ಲೂಟಿಯಲ್ಲಿ ನಿಸ್ಸೀಮರು. ಚುನಾವಣೆಯನ್ನು ಗೆಲ್ಲುವುದಕ್ಕೆ ಯಾವುದೇ ಅತಿರೇಕಕ್ಕೂ ಹೋಗಲಿದ್ದಾರೆ. ಎಲ್ಲ ಕಡೆಯಿಂದ ಚಕ್ರವ್ಯೂಹವನ್ನು ಪ್ರವೇಶಿಸಿದ ರೀತಿಯಲ್ಲಿ ಅವರು ಈ ಬಾರಿ ಉಪಚುನಾವಣೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಹಗರಣಗಳ ಸರಣಿಯೇ ನಡೆದಿದೆ. ರೈತರ ಭೂ ಕಬಳಿಕ ಆಗುತ್ತಿದೆ. ಮಳೆಯ ಹಾನಿಯ ಪರಿಹಾರ ಕೊಡಲಾಗದ ದಯನೀಯ ಸ್ಥಿತಿ ಮುಂದುವರೆದಿದೆ. ಕಾಂಗ್ರೆಸ್ನ ದುರಾಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಮೂರಕ್ಕೇ ಮೂರೂ ಸ್ಥಾನಗಳನ್ನು ಎನ್ಡಿಎ ಗೆಲ್ಲಲಿದೆ ಎಂದರು.




