ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ಎರಡು ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳ ಕಂತಿನ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.
ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಭರವಸೆ ನೀಡಿದರು.
ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದರು.
ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದರು.




