ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಬೆಳೆ ಹಾನಿ ಪರಿಹಾರ

2 years ago

ಜಿಲ್ಲೆಯ 79,574 ರೈತರಿಗೆ ರೂ. 15.51 ಕೋಟಿ ಸಬ್ಸಿಡಿ ಜಮೆ

ಬಾಕಿ ಉಳಿದ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿದೆ

ಧಾರವಾಡ: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಮಆರ್ಎಿಫ್, ಎನ್ಡಿಗಆರ್ಎರಫ್  ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂ. ವರೆಗೆ ಪಾವತಿಸಲು ಸರ್ಕಾರ ನಿರ್ಧರಿಸಿದೆ. ಹಾಗೂ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿ ಆರ್ಎರಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿ ಆರ್ಎರಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ,  (FRUITS ID) ಪ್ರೂಟ್ಸ್ ಐಡಿ ಹೊಂದಿರುವ ಮತ್ತು ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅದರಂತೆ ನಾಲ್ಕು ಹಂತಗಳಲ್ಲಿ ಜಿಲ್ಲೆಯ ಒಟ್ಟು 79,574 ರೈತರಿಗೆ ರೂ. 15.51 ಕೋಟಿಗಳ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಿರುತ್ತಾರೆ. ಬಾಕಿ ಉಳಿದ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು, ತುರ್ತಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೈತರು, ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ನಾಡ ಕಚೇರಿ, ಗ್ರಾಮ ಪಂಚಾಯತಿ, ರೈತ ಸಂಪರ್ಕ ಕೇಂದ್ರ ಅಥವಾ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಬಹುದು ಅಥವಾ  https://parihara.karnataka.gov.in/service ನಲ್ಲಿ Calamity:Drought  & Adhar No. ಅಥವಾ Farmer ID  ಅಥವಾ Mobile No.  ಅಥವಾ Survey No. ಗಳ ವಿವರವನ್ನು ನಮೂದಿಸಿ, ರೈತರು ವೈಯಕ್ತಿಕ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ದೂ: 0836-2233840, 1077, ಧಾರವಾಡ ಉಪ-ವಿಭಾಗದ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯ ದೂ: 0836-2233860, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಾರ್ಯಾಲಯ 0836-2447517, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ದೂ: 0836-2746334 ತಹಶೀಲ್ದಾರ ಕಾರ್ಯಾಲಯಗಳಾದ  ಧಾರವಾಡ ದೂ: 0836-2233822, ಹುಬ್ಬಳ್ಳಿ ದೂ: 0836-2233844, ಹುಬ್ಬಳ್ಳಿ ನಗರ ದೂ:0836-2358035, ಕುಂದಗೋಳ ದೂ: 08304-290239 ಕಲಘಟಗಿ ದೂ: 08970-284535, ನವಲಗುಂದ ದೂ: 0830-229240, ಅಣ್ಣಿಗೇರಿ ದೂ: 9008249921 ಅಳ್ನಾವರ ದೂ: 0836-2385544 ಸಹಾಯವಾಣಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೂಟ್ಸ್ ಐಡಿಗೆ ಪಹಣಿ ಜೋಡಣೆ ಕಡ್ಡಾಯವಾಗಿರುವುದರಿಂದ ಇದುವರೆಗೂ (FRUITS ID) ಪ್ರೂಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಪತ್ರಿಕೆಗಳ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ನೀಡಿ, (FRUITS ID) ಪ್ರೂಟ್ಸ್ ಐಡಿಯನ್ನು ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಂತಹ ರೈತರು ಪರಿಹಾರಕ್ಕೆ ಅರ್ಹರಾಗುವುದಿಲ್ಲ. ಧಾರವಾಡ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು  ತಿಳಿಸಿದ್ದಾರೆ.

Leave a Reply