ಮೈಸೂರು: ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ‌್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರಳ ಸಾಧನೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುರಾರ್ಜಿ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‌್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸುತ್ತೇನೆ ಎಂದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ ಎಂದರು.
90ರ ದಶಕದಲ್ಲಿ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಅವರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಹೇಳಿದರು.




