ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಕಳೆದ ಬಾರಿಗಿಂತ ಈ ವರ್ಷ ಪಟಾಕಿ ಅವಘಡಗಳಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ಹೆಚ್ಚಾಗಿದೆ. ಪಟಾಕಿ ಅವಘಡಗಳಿಂದ ಈವರೆಗೆ 150 ಕ್ಕೂ ಹೆಚ್ಚು ಜನರ ಕಣ್ಣಿಗೆ ಗಾಯವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ಹಲವರು ದೃಷ್ಟಿ ಕಳೆದುಕೊಳ್ಳುವ ಆತಂಕವಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ 54 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 32 ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿದ್ದಾರೆ. 23 ಜನರಿಗೆ ಗಂಭೀರ ಮತ್ತು 26 ಜನರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. 4 ಜನರಿಗೆ ಸರ್ಜರಿ ಮಾಡಲಾಗಿದೆ. 27 ಜನ ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದು, 22 ಜನ ಅಕ್ಕಪಕ್ಕ ಇದ್ದವರು ಪಟಾಕಿ ಸಿಡಿಸುವಾಗ ಕಿಡಿಗಳು ಬಿದ್ದು ಗಾಯಗೊಂಡಿದ್ದಾರೆ.
ಪಟಾಕಿ ಅವಘಡದಿಂದ 35 ಜನ ಚಿಕಿತ್ಸೆ ಪಡೆದು ಹೋಗಿದ್ದರೆ, 14 ಜನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಒಂದೇ ದಿನ 20 ಪಟಾಕಿ ಅವಘಡ ಪ್ರಕರಣಗಳು ದಾಖಲಾಗಿವೆ. ಇನ್ನು, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 18, ನಾರಾಯಣ ನೇತ್ರಾಲಯದಲ್ಲಿ 73 ಹಾಗೂ ಅಗರ್ವಾಲ್, ವಾಸನ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಿವರ್ಷ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಹೊಡೆಯಲಾಗುತ್ತದೆ. ಪಟಾಕಿ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಕೂಡ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಜೊತೆಗೆ ಪಟಾಕಿಯಿಂದ ಶಬ್ದ, ವಾಯು ಮಾಲಿನ್ಯ ಕೂಡ ಉಂಟಾಗುತ್ತಿದೆ.
ಈ ಬಾರಿ ದೀಪಾವಳಿ ಪಟಾಕಿಯಿಂದ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಕಸ್ತೂರಿ ನಗರ, ಹೆಬ್ಬಾಳ, ಸಿಟಿ ರೈಲ್ವೆ ನಿಲ್ದಾಣ, ಬಿಟಿಎಂ ಲೇಔಟ್, ಪೀಣ್ಯ, ಜಯನಗರ ಮತ್ತು ಜಿಗಣಿಯಲ್ಲಿ ಹೆಚ್ಚು ವಾಯು ಮಾಲಿನ್ಯವಾಗಿದೆ.
ಪಾಲಿಕೆ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪಟಾಕಿ ನಿಯಮ ಪಾಲನೆ ಮಾಡದವರ ವಿರುದ್ಧ 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಅತಿ ಹೆಚ್ಚು ಈಶಾನ್ಯ ವಲಯದಲ್ಲಿ ಪ್ರಕರಣಗಳು ದಾಖಲಾಗಿವೆ.



