ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಇವರು ಕೈಗೊಂಡ ಕ್ರಮಗಳಿಂದ ಕಳೆದ ಒಂದು ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ.
ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಕ್ಯಾಮರಾಗಳು, ಸೆನ್ಸಾರ ಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, ಕಳೆದ ಕೆಲವೇ ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿದ್ದಾರೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗಂಟೆಗೆ 130 ಕಿಲೋಮೀಟರ್ ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ವಾಹನ ಸೀಜ್ ಮಾಡಿ, ಲೈಸೆನ್ಸ್ ಕೂಡ ಅಮಾನತಿನಲ್ಲಿ ಇಡಲಾಗುತ್ತದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಈವರೆಗೆ 193 ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇವೆ. ಎರಡು ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಮೀರಿದ್ದಾರೆ. ಐಟಿಎಮ್ಎಸ್ ಕ್ಯಾಮರಾದಿಂದ ವಾಹನಗಳ ಮೇಲೆ ನಿಗಾ ಇಡಲಾಗುತ್ತಿದೆ. 9 ರೀತಿಯ ನಿಮಯಗಳು ಇದರಲ್ಲಿ ಡಿಟೆಕ್ಟ್ ಆಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನೂರಕ್ಕಿಂತ ಹೆಚ್ಚು ವೇಗದಲ್ಲಿ ಹೋದರೆ ಐಟಿಎಮ್ಎಸ್ ಕ್ಯಾಮರಾ ಪತ್ತೆ ಮಾಡಿ ಮಾಹಿತಿ ಕಳುಹಿಸುತ್ತದೆ. ಅಂಥವರಿಗೆ ಫೈನ್ ಬೀಳಲಿದೆ. ಎಐ ಕ್ಯಾಮೆರಾ ಪೋಲ್ ಬಳಿ ಮಾತ್ರವಷ್ಟೇ ಅಲ್ಲ, ಕ್ಯಾಮೆರಾ ಇಲ್ಲದ ಜಾಗದಲ್ಲಿ ವೇಗವಾಗಿ ಹೋದರೂ ಗೊತ್ತಾಗುತ್ತದೆ. ಎರಡು ಕ್ಯಾಮರಾಗಳ ಮಧ್ಯೆ ಇಂತಿಷ್ಟೇ ವೇಗದ ಮಿತಿ ಹಾಗೂ ಸಮಯ ಫಿಕ್ಸ್ ಆಗಿರುತ್ತದೆ. ನೂರಕ್ಕಿಂತ ಹೆಚ್ಚು ವೇಗದಲ್ಲಿ ತೆರಳಿದರೆ, ಸಮಯಕ್ಕಿಂತ ಮುಂಚೆ ಕ್ಯಾಮರಾ ಪೋಲ್ ಬಂದ್ರೆ ದಂಡ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.




