ಮಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಮಾರ್ಪಡಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನಾಂದೋಲನ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು ಎಂದರು.
ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಜನವರಿ 26ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ಮನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು ಎಂದರು.




