ಬೆಂಗಳೂರು: ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಅವರ ಗೃಹ ಕಚೇರಿಯಲ್ಲಿ ಎಂ ಪಿ ರೇಣುಕಾಚಾರ್ಯ ಭೇಟಿಮಾಡಿ ಮಹತ್ವದ ಮಾತುಕತೆ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಎಂ ಟಿ ರೇಣುಕಾಚಾರ್ಯ, ನಮ್ಮ ಸರ್ಕಾರದ ಅವಧಿಯಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ರೈತ ಬಾಂಧವರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೃಷಿ & ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸುವ ಹಾಗೂ ಅಂತರ್ಜಲವನ್ನು ಹೆಚ್ಚಿಸುವ ಮಹತ್ವದ ಯೋಜನೆಗೆ ನನ್ನ ಮನವಿಯ ಮೇರೆಗೆ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನವರು ₹519 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಸಾರ್ವಜನಿಕರ ದೃಷ್ಟಿಯಿಂದ ಉಳಿದ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ 2021-2022ನೇ ಸಾಲಿನಲ್ಲಿ SCP & TSP ಯೋಜನೆಯಡಿ ಒಟ್ಟು ₹2.50ಕೋಟಿ ರೂಪಾಯಿ ಅನುದಾನದಲ್ಲಿ ಬೋರ್ವೆಲ್ ಕೊರೆಯುವ ಯೋಜನೆ ಮಂಜೂರು ಮಾಡಿಸಿದ್ದು, ಕಾಮಗಾರಿ ಟೆಂಡರ್ ಆಗಿತ್ತು, ಸಾರ್ವಜನಿಕರ ದೃಷ್ಟಿಯಿಂದ ಈ ಟೆಂಡರ್ ಪ್ರಕ್ರಿಯೆಗಳನ್ನು ಯಥಾಸ್ಥಿತಿ ಮುಂದುವರಿಸಲು ಹಾಗೂ ನಮ್ಮ ಸರ್ಕಾರದ ಅವಧಿಯಲ್ಲಿ ನೀರಾವರಿ ನಿಗಮದಿಂದ ಹೊನ್ನಾಳಿ-ನ್ಯಾಮತಿ ತಾಲ್ಲೂಕುಗಳ ವಿವಿಧ ಸಮಾಜಗಳ ಸಮುದಾಯ ಭವನಗಳಿಗೆ ₹5.00ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿಸಿದ್ದು ತಡೆಹಿಡಿಯಲಾದ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಮೇಲ್ಕಂಡ ಮೂರು ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ವಿನಂತಿಸಿದೆನು. ಈ ಸಂಧರ್ಭದಲ್ಲಿ ಬಹಳ ಆತ್ಮೀಯವಾಗಿ ಕುಶಲೋಪರಿ ವಿಚಾರಿಸಿ ಚರ್ಚೆ ನಡೆಸಿದರು.
ಸದರಿ ಭಾವಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿದ್ದು, ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರುವ ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.








