ಮುಖ್ಯಮಂತ್ರಿ Siddaramaiah ಮತ್ತು ಡಿಸಿಎಂ DK Shivakumar ಅವರ ನಡುವಿನ ಬಹುನಿರೀಕ್ಷಿತ ‘ಬೆಳಗಿನ ಉಪಾಹಾರ ಶೃಂಗಸಭೆ’ ಅಂತೂ ಇಂತೂ ಜರುಗಿದೆ… 🍽️😂
ಅಸಲಿಗೆ ಇದನ್ನು “ಬ್ರೇಕ್‌ಫಾಸ್ಟ್ ಮೀಟಿಂಗ್” ಎಂದು ಕರೆಯುವುದು ಒಂದು ಔದಾರ್ಯವೇ ಸರಿ. ನಿಜ ಹೇಳಬೇಕು ಅಂದರೆ ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕುವ, ಕತ್ತಿ ಮಸಿಯುವ ಎರಡು ಯುದ್ಧ ನಿರತ ಬಣಗಳ ಕಮಾಂಡರ್‌ಗಳ ನಡುವಿನ “ಕದನ ವಿರಾಮ” ಸಭೆಯಂತೆ ಕಾಣಿಸಿತು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಎಲ್ಲಕ್ಕಿಂತ ಮಿಗಿಲಾದ ಅತ್ಯಂತ ಹಾಸ್ಯಾಸ್ಪದ ಸಂಗತಿ ಏನೆಂದರೆ – ಇಬ್ಬರೂ ನಾಯಕರು ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿರುವ ಎಲ್ಲಾ ಗೊಂದಲಗಳಿಗೆ ಮಾಧ್ಯಮಗಳನ್ನೇ ದೂಷಿಸುತ್ತಿರುವುದು.
ಪ್ರಶ್ನೆ ಇಷ್ಟೇ, ಸ್ವಾಮಿ: ಇಷ್ಟಕ್ಕೂ ಈ ಗೊಂದಲ ಸೃಷ್ಟಿಸಿದ್ದು ಯಾರು? ಮಾಧ್ಯಮಗಳೋ, ತಾವುಗಳೋ?
❓ ನವೆಂಬರ್‌ನಲ್ಲಿ ‘ಕ್ರಾಂತಿ’ ಎಂದು ಕರೆ ನೀಡಿ, ಹೇಳಿಕೆಗಳ ಮೇಲೆ ಹೇಳಿಕೆ ಕೊಟ್ಟು, ಪಕ್ಷದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದು ಪತ್ರಕರ್ತರಾ?
❓ “ಕೊಟ್ಟ ಮಾತು ಉಳಿಸಿಕೊಳ್ಳವವನು ನಿಜವಾದ ನಾಯಕ,” “ಐದಾರು ಜನರ ಮಧ್ಯೆ ನಡೆದಿರುವ ‘ವ್ಯಾಪಾರ'”, “ಐದು ವರ್ಷ ನಾನೇ ಸಿಎಂ” ಎಂದೆಲ್ಲಾ ಬಹಿರಂಗ ಹೇಳಿಕೆಗಳ ಮೂಲಕ ಬಿಕ್ಕಟ್ಟು ಸೃಷ್ಟಿಸಿದ್ದು ಪತ್ರಕರ್ತರಾ?
❓ ಶಕ್ತಿ ಪ್ರದರ್ಶನಕ್ಕೆಂದು ಶಾಸಕರ ಗುಂಪುಗಳನ್ನು ಕಟ್ಟಿಕೊಂಡು ತಂಡ ತಂಡವಾಗಿ ದೆಹಲಿಗೆ ಹೋಗಿ, ಗುಪ್ತ ಸಭೆಗಳನ್ನು ನಡೆಸಿದ್ದು ಪತ್ರಕರ್ತರಾ?
ಇವತ್ತು ರಾಜ್ಯದಲ್ಲಿ ಸೃಷ್ಟಿ ಆಗಿರುವ ಈ ಎಲ್ಲಾ ಗೊಂದಲಗಳಿಗೆ ಕಾರಣವೇನು ಗೊತ್ತೇ? ತಮ್ಮಿಬ್ಬರ ಒಣಪ್ರತಿಷ್ಠೆ, ಅಧಿಕಾರದ ಲಾಲಸೆ ಮತ್ತು ಶಾಸಕರ ಗುಂಪುಗಾರಿಕೆಯೇ ಕಾರಣವೇ ಹೊರತು, ನಿಮ್ಮ ನಾಟಕಗಳನ್ನು ವರದಿ ಮಾಡಿ ಸತ್ಯವನ್ನು ಬಿತ್ತರಿಸಿದ ಮಾಧ್ಯಮಗಳಲ್ಲ.
ಈ ತೋರಿಕೆಯ “ಏಕತೆಯ ಪ್ರದರ್ಶನ”ದ ಹಿಂದೆ ಎಲ್ಲರಿಗೂ ಸ್ಪಷ್ಟವಾಗಿ ಕಾಣುತ್ತಿರುವುದು ಬಿಡಿಸಲಾಗದ ಕಗ್ಗಂಟು ಮತ್ತು ಸಂಪೂರ್ಣವಾಗಿ ಒಡೆದ ಕನ್ನಡಿಯ ಚೂರುಗಳೇ ಹೊರತು, ಯಾವುದೇ ಪ್ರಾಮಾಣಿಕ ಮೈತ್ರಿಯಲ್ಲ. ಇದು ಕೇವಲ ಒಂದು ಕ್ಷಣಿಕ ‘ಆಪ್ಟಿಕ್ಸ್’ ಅಷ್ಟೇ ಎನ್ನುವುದು ಮಾತ್ರ ಗ್ಯಾರಂಟಿ.
– ಆರ್ ಅಶೋಕ್ ವಿಧಾನಸಭೆ ವಿಪಕ್ಷ ನಾಯಕ



