ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.
ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ, ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿದೆ.




