ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಹಕಾರಿ ಸಂಘ, ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಸುಮಾರು 100 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕಳೆದ 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ)ಯ ನಿಬಂಧನೆಗಳಡಿ ಮುಡಾದ ನಿವೇಶನಗಳು ಸೇರಿದಂತೆ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರಿ ಆದೇಶಗಳನ್ನು ನೇರವಾಗಿ ಉಲ್ಲಂಘಿಸಿ ನಕಲಿ / ಅಪೂರ್ಣ ದಾಖಲೆಗಳನ್ನು ಬಳಸಿ ನಿವೇಶನಗಳನ್ನ ಹಂಚಿಕೆ ಮಾಡಲಾಗಿದೆ. ಕೆಲವು ಸಂದರ್ಭಗಳಲ್ಲಿ ಹಿಂದಿನ ದಿನಾಂಕಗಳನ್ನ ನಮೂದಿಸಿ ಹಂಚಿಕೆ ಪತ್ರಗಳನ್ನ ನೀಡಲಾಗಿದೆ. ಮತ್ತು ಈ ಅಕ್ರಮ ಹಂಚಿಕೆಗಳಿಗೆ ಪ್ರತಿಯಾಗಿ ಸಹಕಾರಿ ಸಂಘ ಮತ್ತು ಹಂಚಿಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಧಿಕಾರಿಗಳ ಸಂಬಂಧಿಕರು/ಸಹವರ್ತಿಗಳ ಬ್ಯಾಂಕ್ ಖಾತೆಗಳಿಗೆ ಹಣ ರವಾನಿಸಲಾಗಿದೆ ಎಂದು ಇಡಿ ಉಲ್ಲೇಖಿಸಿದೆ.
ವಿವಿಧ ಕಾನೂನುಗಳು, ಮಾರ್ಗಸೂಚಿಗಳನ್ನ ಉಲ್ಲಂಘಿಸಿ ಮೋಸದ ವಿಧಾನಗಳ ಮೂಲಕ ಮುಡಾ ಸೈಟ್‌ಗಳ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿರುವುದನ್ನ ಇಡಿ ತನಿಖೆ ಬಹಿರಂಗಪಡಿಸಿದೆ. ಪರಿಹಾರದ ನಿವೇಶನಗಳನ್ನ ಅರ್ಹರಲ್ಲದ ವ್ಯಕ್ತಿ, ಸಂಸ್ಥೆಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದರಲ್ಲಿ ಮುಡಾದ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸೇರಿದಂತೆ ಇತರರು ಪ್ರಮುಖ ಪಾತ್ರವಹಿಸಿದ್ದಾರೆ. ಪ್ರತಿಯಾಗಿ ಲಂಚ ಪಡೆದಿದ್ದಕ್ಕೆ ಸಂಬಂಧಿಸಿದ ಪುರಾವೆಗಳು, ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಲಾಗಿದೆ ಎಂದು ಇಡಿ ತಿಳಿಸಿದೆ.
ಈ ಹಿಂದೆ ಸುಮಾರು 300 ಕೋಟಿ ರೂ ಮೌಲ್ಯದ 160 ಮುಡಾ ನಿವೇಶನಗಳನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು, ಈ 92 ಸ್ಥಿರಾಸ್ತಿಗಳ ಬಳಿಕ ಒಟ್ಟು ಸುಮಾರು 400 ಕೋಟಿ ರೂ.ಗಳಷ್ಟು ಮುಟ್ಟುಗೋಲು ಹಾಕಿಕೊಂಡಂತಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.




