ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ತುಸು ನಿರಾಳರಾಗಿದ್ದಾರೆ.
ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದ್ದು, ಆರೋಪಿಗೆ ಸಮನ್ಸ್ ಜಾರಿಗೊಳಿಸಬೇಕೆಂಬ ನಿಯಮವಿಲ್ಲ ಎಂದರು.
ಸಚಿವ ಭೈರತಿ ಸುರೇಶ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ. 14 ಸೈಟ್ ಹಂಚಿಕೆಗೂ ಭೈರತಿ ಸುರೇಶ್ ಗೂ ಯಾವುದೇ ಸಂಬಂಧವಿಲ್ಲ. ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇಡಿ ಸಮನ್ಸ್ ಕಾನೂನುಬಾಹಿರ ಎಂದು ಪೀಠದ ಮುಂದೆ ವಾದ ಮಂಡಿಸಿದರು.
ಭೈರತಿ ಸುರೇಶ್ ಯಾವ ಇಲಾಖೆ ಸಚಿವರೆಂದು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಸಿ ವಿ ನಾಗೇಶ್ ಪ್ರತಿಕ್ರಿಯಿಸಿ, ಭೈರತಿ ಸುರೇಶ್ ನಗರಾಭಿವೃದ್ಧಿ ಇಲಾಖೆ ಸಚಿವರು ಎಂದು ಉತ್ತರಿಸಿದರು.
ಭೈರತಿ ಸುರೇಶ್ 2023ರಲ್ಲಷ್ಟೇ ನಗರಾಭಿವೃದ್ದಿ ಸಚಿವರಾಗಿದ್ದಾರೆ. ಇಡಿ ಕಳುಹಿಸಿರುವ ನಮೂನೆಯಲ್ಲಿ ವೈಯಕ್ತಿಕ ವಿವರ ಕೇಳಿದ್ದಾರೆ. ಇದು ಖಾಸಗಿತನದ ಹಕ್ಕಿನ ಸ್ಪಷ್ಟ ಉಲ್ಲಂಘನೆ. ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಇಡಿ ಸಮನ್ಸ್ ಹೈಕೋರ್ಟ್ ರದ್ದುಪಡಿಸಿದೆ ಎಂದು ಹೈಕೋರ್ಟ್ ಆದೇಶದ ವಿವರ ಓದಿದರು.
ಡಿ.ಬಿ.ನಟೇಶ್ ವಿರುದ್ಧದ ಶೋಧನೆ, ಜಪ್ತಿ ಕ್ರಮ ರದ್ದುಪಡಿಸಲಾಗಿದೆ. ಹೈಕೋರ್ಟ್ ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಸ್ವಾತಂತ್ರ್ಯ ಕೊಟ್ಟಿದೆ. ಭೈರತಿ ಸುರೇಶ್ ಪಾತ್ರದ ಬಗ್ಗೆ ಸಮನ್ಸ್ ಯಾವುದೇ ಉಲ್ಲೇಖವಿಲ್ಲ. 2023 ರ ಜೂನ್ ತಿಂಗಳಿನಲ್ಲಷ್ಟೇ ನಗರಾಭಿವೃದ್ದಿ ಸಚಿವರಾಗಿದ್ದಾರೆ ಎಂದು ವಾದ ಮಂಡಿಸಿದರು. ನಗರಾಭಿವೃದ್ಧಿ ಸಚಿವರಾಗಿರುವುದರಿಂದಲೇ ಸಮನ್ಸ್ ನೀಡರಬಹುದಲ್ಲವೇ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಿ.ವಿ.ನಾಗೇಶ್, ಇಡಿ ಯಾವುದೇ ಕಾರಣ ನೀಡದೇ ಸಮನ್ಸ್ ಜಾರಿಗೊಳಿಸಿದೆ. 14 ಸೈಟ್ ಹಂಚಿಕೆ ವಿಚಾರದಲ್ಲಿ ಭೈರತಿ ಸುರೇಶ್ ಪಾತ್ರವಿಲ್ಲ. ತಂಗಿ, ಮಗಳು, ಅಳಿಯ ಸಂಬಂಧಿಗಳ ಬ್ಯಾಂಕ್ ಅಕೌಂಟ್ ಕೇಳಿದ್ದಾರೆ. ಇನ್ನೂ ಮೊಮ್ಮಕ್ಕಳು ಇಲ್ಲ. ಹೀಗಾಗಿ ಮೊಮ್ಮಕ್ಕಳ ವಿವರ ಕೇಳಿಲ್ಲ. ಐಟಿ ಅಧಿಕಾರಿಗಳು ಕೇಳಿದ್ದರೇ ಹೇಳಬಹುದು, ಇಡಿಗಲ್ಲ ಎಂದು ಇಡಿಯ ಸಮನ್ಸ್ ನ ನಮೂನೆ ಉಲ್ಲೇಖಿಸಿದರು.
ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ವಾದ ಮುಂದುವರೆಸಿ, ಒಂದೆರಡು ದಿನಗಳಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುತ್ತೇನೆ. ಅರ್ಜಿದಾರರ ಪರ ವಕೀಲರು ಇಂದೇ ವಾದ ಮುಗಿಸಬಹುದು ಎಂದರು.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಅಪರಾಧದಿಂದ ಗಳಿಸಿದ ಹಣವಿಲ್ಲ. ಅಕ್ರಮ ಹಣ ವರ್ಗಾವಣೆ ಇಲ್ಲದಿರುವುದರಿಂದ ಇಡಿ ತನಿಖೆ ಸರಿಯಲ್ಲ. ಈಗಾಗಲೇ ತನಿಖೆ ನಡೆದಿರುವ ಬಗ್ಗೆಯೇ ಇಡಿ 2ನೇ ತನಿಖೆ ನಡೆಸುವಂತಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಡಿ.ಬಿ.ನಟೇಶ್ ಪ್ರಕರಣದಲ್ಲಿ ಇಡಿಯ ಸರ್ಚ್ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನನ್ನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದರು.
ಇಡಿ ಸರ್ಚ್ ಮತ್ತು ಸೀಜ್ ನಲ್ಲಿ ಯಾವುದೇ ದಾಖಲೆ ಸಿಕ್ಕಿಲ್ಲ. ಏನೂ ಸಿಗದೇ ಇಡಿ ಡಿ.ಬಿ.ನಟೇಶ್ ಮೊಬೈಲ್ ಸೀಜ್ ಮಾಡಿದ್ದರು. ಇಡಿ ಸಮನ್ಸ್ ನೀಡುವ ಮುನ್ನ ಪ್ರಕ್ರಿಯೆ ಪಾಲಿಸಿಲ್ಲ. ಅಕ್ರಮ ಹಣ ವರ್ಗಾವಣೆ ತಡೆಯಲು ಪಿಎಂಎಲ್ಎ ಕಾಯ್ದೆ ತರಲಾಗಿದೆ. ಮಾದಕ ದ್ರವ್ಯ ಸಾಗಾಟದಂತಹ ಹಣ ಆರ್ಥಿಕತೆಗೆ ಬರಬಾರದು. ಹೀಗಾಗಿಯೇ ಪಿಎಂಎಲ್ಎ ಕಾಯ್ದೆ ಜಾರಿಗೆ ತರಲಾಯಿತು. ಆದರೆ ಇಡಿ ಅದನ್ನು ಎಲ್ಲಾ ಕೇಸ್ ಗೂ ಅನ್ವಯಿಸುತ್ತಿದೆ ಎಂದು ವಾದಿಸಿದರು.
ಒಬ್ಬ ವ್ಯಕ್ತಿ 1 ಕೋಟಿ ಹಣ ವಂಚಿಸಿದ್ದಾನೆಂದುಕೊಳ್ಳೋಣ. ಆ ಹಣ ವಾಪಸ್ ಕೊಟ್ಟರೆ ವಂಚನೆ ಕೇಸ್ ಮುಕ್ತಾಯವಾಗುವುದಿಲ್ಲ. ಆದರೆ ಪಿಎಂಎಲ್ ಕಾಯ್ದೆಯಡಿ ಕೇಸ್ ಮುಕ್ತಾಯಗೊಳ್ಳುತ್ತದೆ. ಏಕೆಂದರೆ ಜಪ್ತಿ ಮಾಡಲು ಆ ಅಕ್ರಮ ಹಣ ಇರುವುದಿಲ್ಲ. ಅನುಸೂಚಿತ ಅಪರಾಧದಿಂದ ಅಕ್ರಮ ಹಣ ಗಳಿಸಿರಬೇಕು. ಆ ಹಣವನ್ನು ಆರ್ಥಿಕತೆಗೆ ಬಿಟ್ಟು ಲಾಭ ಗಳಿಸುತ್ತಿರಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಗಳು ಈ ಕೇಸ್ ನಲ್ಲಿ ನಡೆದಿಲ್ಲ ಎಂದರು.
ಆಕ್ಷೇಪಣೆ ಎಂದು ಸಲ್ಲಿಸುತ್ತೀರೆಂದು ಹೈಕೋರ್ಟ್ ಕೇಳಿದ ಪ್ರಶ್ನೆಗೆ ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಪ್ರತಿಕ್ರಿಯಿಸಿ, ಒಂದೆರಡು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸುತ್ತೇವೆ. ಫೆಬ್ರವರಿ 14 ರಂದು ವಾದಮಂಡನೆಗೆ ಸಿದ್ದವೆಂದು ಹೇಳಿದರು.
ಸಿಎಂ ಪತ್ನಿ ಪರ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿ ಮುಂದಿನ ವಾರಕ್ಕೆ ವಿಚಾರಣೆ ನಿಗದಿ ಮಾಡುವಂತೆ ಮನವಿ ಮಾಡಿದರು. ಆದರೆ ಹೈಕೋರ್ಟ್ ಫೆಬ್ರವರಿ 20ಕ್ಕೆ ವಿಚಾರಣೆ ನಿಗದಿಪಡಿಸಿತು.




