ಮುಡಾ ನಿವೇಶನ ಹಂಚಿಕೆ ತನಿಖಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅಕ್ರಮ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ಕುರಿತ ತನಿಖಾ ವರದಿ ರಾಜ್ಯ ಸರ್ಕಾರದ ಕೈ ಸೇರಿದೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಬದಲಿ ನಿವೇಶನಗಳನ್ನು ನೀಡುವ ಮೂಲಕ ವ್ಯಾಪಕ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ನೇತೃತ್ವದಲ್ಲಿ ಆಯೋಗ ರಚಿಸಿತ್ತು.

ಈ ಆಯೋಗ ಇದೀಗ ತನ್ನ ತನಿಖೆಯನ್ನು ಪೂರ್ಣಗೊಳಿಸಿದ್ದು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಆರು ಸಂಪುಟಗಳಲ್ಲಿ ಇರುವ ತನಿಖಾ ವರದಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರಿಂದ ಸ್ವೀಕರಿಸಿದರು. ಈ ವರದಿಯನ್ನು ಮುಂಬರುವ ಸಚಿವ ಸಂಪುಟ ಸಭೆಯ ಮುಂದೆ ಮಂಡಿಸುವ ಸಾಧ್ಯತೆ ಇದೆ.

Leave a Reply