ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿರುವ ತಂತ್ರಸ್ತ ಮಹಿಳೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿದಲ್ಲಿ ತಮ್ಮಲ್ಲಿರುವ ದಾಖಲೆಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿರುವ ಅವರು, ಮುನಿರತ್ನ ಅವರು ತಮ್ಮನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿ ಟ್ರ್ಯಾಪ್ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.
ಮುನಿರತ್ನ ಅವರು ತಮ್ಮ ಕೆಲಸ ಸಾಧಿಸಿಕೊಳ್ಳಲು ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಇಬ್ಬರು ಮಾಜಿ ಸಿಎಂಗಳ ವಿಡಿಯೋಗಳು ನನ್ನ ಬಳಿ ಇದೆ. ಇವುಗಳು ಮುನಿರತ್ನ ಅವರ ಬಳಿಯೂ ಇವೆ. ಇವುಗಳನ್ನು ಅವರು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುವುದಾಗಿ ತಿಳಿಸಿದ್ದರು ಎಂದರು.
ಸದ್ಯ ಈ ಮಾಜಿ ಮುಖ್ಯಮಂತ್ರಿಗಳು ಯಾರೆಂದು ಮಾತ್ರ ಬಹಿರಂಗಪಡಿಸುವುದಿಲ್ಲ. ತಮಗೆ ಮುನಿರತ್ನ ಆಪ್ತರೂ ಸೇರಿದಂತೆ ಕೆಲವರಿಂದ ಅಪಾಯವಿದೆ. ಹೀಗಾಗಿ ಸೂಕ್ತ ರಕ್ಷಣೆ ಕೊಟ್ಟರೆ ವಿಡಿಯೋ ನೀಡುತ್ತೇನೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖೆ ತಂಡಕ್ಕೆ ಎಲ್ಲ ಮಾಹಿತಿಯನ್ನು ನೀಡಿದ್ದೇನೆ ಎಂದರು.
ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರ ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಸವಾಲೆಸೆದರು
ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದರು.




