ಬೆಂಗಳೂರು: ಪಕ್ಷದ ಹೈಕಮಾಂಡ್ ಮಹಾರಾಷ್ಟ್ರದ ಪಶ್ಚಿಮ ಭಾಗದ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ತಮ್ಮನ್ನು ನೇಮಿಸಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ಅಲ್ಲಿ ಕಾಂಗ್ರೆಸ್ ಇರುವ ಮೈತ್ರಿಕೂಟ (ಮಹಾವಿಕಾಸ ಅಘಾಡಿ) ಜಯಭೇರಿ ಬಾರಿಸಲಿದೆ ಎಂದು ಸಚಿವ ಎಂ ಬಿ ಪಾಟೀಲ ವಿಶ್ವಾಸ ವ್ಯಕಪಡಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಶರದ್ ಪವಾರ್ ಅವರ ಎನ್ಸಿಪಿ ಜತೆ ಮೈತ್ರಿ ಹೊಂದಿದೆ. ಅಲ್ಲಿ ಆಡಳಿತಾರೂಢ ಬಿಜೆಪಿ, ಸೇನೆ ಮತ್ತು ಶಿಂದೆ ಅವರ ಸೇನಾ ಬಣಗಳ ವಿರುದ್ಧ ದೊಡ್ಡ ಆಡಳಿತಾರೂಢ ಅಲೆ ಎದ್ದಿದೆ ಎಂದರು.
ಮಹಾರಾಷ್ಟ್ರದ ಚುನಾವಣೆಯಲ್ಲಿ ಅಲ್ಲಿನ ಸ್ಥಳೀಯ ವಿಚಾರಗಳು ನಿರ್ಣಾಯಕವಾಗಿವೆ. ಮುಡಾ ಪ್ರಕರಣಕ್ಕೂ ಮಹಾರಾಷ್ಟ್ರ ಚುನಾವಣೆಗೂ ಸಂಬಂಧವಿಲ್ಲ. ಮಹಾರಾಷ್ಟ್ರದಲ್ಲಿ ಅಲ್ಲಿಯ ಆಡಳಿತ ನೋಡಿ ಮತದಾರರು ರೋಸಿ ಹೋಗಿದ್ದಾರೆ. ಅಲ್ಲಿ ಬಿಜೆಪಿ ನೇತೃತ್ವದಲ್ಲಿ ಅನೈತಿಕ ರಾಜಕಾರಣ ನಡೆಯುತ್ತಿದೆ. ಜನ ಈ ಬಾರಿ ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದರು.
ಸೊಲ್ಲಾಪುರ, ಸಾಂಗ್ಲಿ, ಕೊಲ್ಲಾಪುರ, ಮೀರಜ್ ಇತ್ಯಾದಿ ಕಡೆ ಮೊದಲಿನಿಂದ ತಮಗೆ ಒಡನಾಟವಿದೆ. ಹೀಗಾಗಿ ಪಕ್ಷ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ ಎಂದರು.




