ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರು ಯೋಧರಂತೆ ಕೆಲಸ ಮಾಡಿದರು. ಆದರೆ ಒಂದೆರಡು ಸಮುದಾಯ ಕಾಂಗ್ರೆಸ್ ಪರವಾಗಿ ನಿಂತಿದ್ದು, ಈ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣವಾಯಿತು ಎಂದು ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ ಎಂದರು.
ನಮ್ಮ ಪಕ್ಷ ಅವರ ಪರವಾಗಿ ನಿಂತರೂ, ಮೀಸಲಾತಿ ಸೇರಿದಂತೆ ಎಷ್ಟೇ ಕೊಡುಗೆಗಳನ್ನು ನೀಡಿದರೂ ಅವರು ನಮ್ಮ ಕೈ ಹಿಡಿದಿಲ್ಲ. ಸಮುದಾಯವನ್ನು ಇದುವರೆಗೆ ನಾವು ನಂಬಿಕೊಂಡು ಬಂದಿದ್ದೆವು. ಈ ಸಲ ಅವರು ನಮ್ಮೊಂದಿಗೆ ನಿಲ್ಲದಿರುವುದು ಸಹ ಫಲಿತಾಂಶದ ಏರುಪೇರಿಗೆ ಕಾರಣವಿರಬಹುದು. ಅವರನ್ನು ಮೀರಿಯು ಪಕ್ಷದ ಬದ್ದ ಕಾರ್ಯಕರ್ತರಿದ್ದಾರೆ. ಅವರೇ ನಮ್ಮ ಬೆನ್ನೆಲುಬು. ಅವರು ಎಂದಿನಂತೆ ಈ ಚುನಾವಣೆಯಲ್ಲೂ ನಮ್ಮ ಕೈ ಹಿಡಿದಿದ್ದಾರೆ ಎಂದರು.
ಇದು ಜೆಡಿಎಸ್ ಕ್ಷೇತ್ರ. ಯಾವುದೇ ಕಾರಣಕ್ಕೂ ಬಿಟ್ಟು ಕೊಡದೆ ನಾವೇ ಇಲ್ಲಿ ನಿಲ್ಲಬೇಕು ಎಂಬ ಸ್ವಾರ್ಥದಿಂದ ನಾವು ಚುನಾವಣೆ ಎದುರಿಸಿದ್ದರೆ ನಾನು ಖಂಡಿತಾ ಗೆಲ್ಲುತ್ತಿದ್ದೆ. ಯಾಕೆಂದರೆ, ಚುನಾವಣೆಗೆ ನಮಗೆ ಕನಿಷ್ಠ ನಾಲ್ಕು ತಿಂಗಳು ಸಮಯ ಸಿಗುತ್ತಿತ್ತು. ಆದರೆ, ನಾವು ಬಿಜೆಪಿ ಜೊತೆ ಮೈತ್ರಿಯಾಗಿದ್ದರಿಂದ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಮೈತ್ರಿ ಪಕ್ಷದ ನಾಯಕರ ಅಭಿಪ್ರಾಯ ಮತ್ತು ಭಾವನೆಗೂ ಗೌರವ ಕೊಡಬೇಕಿತ್ತು. ಅದೇ ಕಾರಣಕ್ಕೆ ನಾಮಪತ್ರ ಸಲ್ಲಿಸುವ ಹಿಂದಿನ ದಿನ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿತು ಎಂದರು.



