ಕೋಲಾರ: ತಾವು ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವುದಿಲ್ಲ, ಪ್ರಚಾರ ಮಾಡುವಂತೆ ತಮಗೆ ಯಾರೂ ಕೂಡ ಆಹ್ವಾನ ನೀಡಿಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಕೋಲಾರ ಜಿಲ್ಲೆಯಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾಮಗಾರಿಯನ್ನು ಗಮನಿಸಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ಹಾಕಲಿ. ಕೆಲವು ನಾಯಕರು ಕೋಲಾರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳಿದ್ದಾರೆ. ಅವರು ಗೆಲ್ಲಿಸಿ ಕೊಂಡು ಬರಲಿ ಎಂದು ಆಶಿಸುತ್ತೇನೆ ಎಂದರು.
ನಿನ್ನೆ ಕುರುಡು ಮಲೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಗೆ ತಮಗೆ ಯಾವುದೇ ಆಹ್ವಾನ ನೀಡಿರಲಿಲ್ಲ. ಹೀಗಾಗಿ ತಾವು ಆ ಸಭೆಗೆ ಹೋಗಿಲ್ಲ. ಅಲ್ಲದೆ ನನಗೆ ನೆರೆಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ಹೀಗಾಗಿ ಅಲ್ಲಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗುತ್ತೇನೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರುವುದು ನನ್ನ ಜವಾಬ್ದಾರಿ. ಹೈಕಮಾಂಡ್ ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.




