ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಆರೋಪಿಗಳನ್ನು ತಮಿಳುನಾಡಿಗೆ ಕೊಂಡೊಯ್ದ ಪೊಲೀಸರು ಅತ್ಯಾಚಾರ ನಂತರ ಹಲ್ಲೆ ನಡೆಸಲು ಬಳಸಿದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆಧಾರಗಳಾದ ಬಟ್ಟೆಗಳು ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರು ಆರೋಪಿಗಳ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಪೋಷಕರು ತಮ್ಮ ಮಕ್ಕಳನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಡಿ ಎಂದು ಮನವಿಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.




