ಬೆಂಗಳೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್‌ನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಕರ್ನಾಟಕದಲ್ಲಿ ನಡೆಯುವ ಮುಂದಿನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲು ಬೆಂಗಳೂರಿನಲ್ಲಿ ಯುವ ಆಟಗಾರರ ಪ್ರತಿಭಾನ್ವೇಷಣೆ ನಡೆಸಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಪ್ರತಿಭಾನ್ವೇಷಣೆಯಲ್ಲಿ ಆಯ್ಕೆಯಾದ ಆಟಗಾರರು ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಲಿದ್ದಾರೆ ಮತ್ತು ಕೆಎಸ್‌ಸಿಎ ಟಿ20 2024ರ ಹರಾಜಿನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಳ್ಳಲಿದ್ದಾರೆ.
ಮೊದಲ ಪ್ರತಿಭಾನ್ವೇಷಣೆಯು ಜುಲೈ 12 ರಂದು ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಿತು. ಇದರಲ್ಲಿ 124 ಮಧ್ಯಮ ವೇಗದ ಬೌಲರ್‌ಗಳು, 54 ಸ್ಪಿನ್ನರ್‌ಗಳು, 47 ಬ್ಯಾಟ್ಸ್ ಮನ್‌ಗಳು, 14 ಆಲ್‌ರೌಂಡರ್‌ಗಳು ಮತ್ತು 20 ವಿಕೆಟ್ ಕೀಪರ್‌ಗಳು ಸೇರಿದಂತೆ 260ಕ್ಕೂ ಹೆಚ್ಚು ಯುವ ಕ್ರಿಕೆಟಿಗರು ಭಾಗವಹಿಸಿದ್ದರು.
ಮುಂದಿನ ಪ್ರತಿಭಾನ್ವೇಷಣೆ ಕಾರ್ಯಕ್ರಮ ಜುಲೈ 18ರಂದು ಮೈಸೂರಿನಲ್ಲಿ ನಡೆಯಲಿದೆ. ಆ ಬಳಿಕ ಆಯ್ಕೆಯಾದ ಆಟಗಾರರ ಹೆಸರನ್ನು ಕೆಎಸ್‌ಸಿಎಗೆ ಶಿಫಾರಸು ಮಾಡಲಾಗುವುದು. ಜುಲೈ 25ರಂದು ನಡೆಯುವ ಹರಾಜು ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಳ್ಳಬಹುದು.
ಹರಾಜು ಪ್ರಕ್ರಿಯೆಯ ಬಳಿಕ ತಂಡವನ್ನು ಸೇರುವ ಆಟಗಾರರು ಮೈಸೂರಿನಲ್ಲಿ ಒಂದು ವಾರಗಳ ಕಾಲ ಕಠಿಣ ತರಬೇತಿ ಪಡೆಯಲಿದ್ದಾರೆ. ನಂತರ ಆಗಸ್ಟ್ 15ರಿಂದ ಸೆಪ್ಟೆಂಬರ್ 1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಮೈಸೂರು ವಾರಿಯರ್ಸ್‌ನ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ ಮಾತನಾಡಿ, ಹಲವು ಯುವ ಪ್ರತಿಭೆಗಳನ್ನು ಗಮನಿಸಿದ್ದೇವೆ. ಹರಾಜು ಪ್ರಕ್ರಿಯೆಯ ಬಳಿಕ ಕೆಲವು ಪ್ರತಿಭೆಗಳು ನಮ್ಮ ತಂಡವನ್ನು ಸೇರಲಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಅವರ ಪ್ರತಿಭೆ ನೋಡಲು ನಾವು ಉತ್ಸುಕರಾಗಿದ್ದೇವೆ ಎಂದರು.
ಪ್ರತಿಭಾನ್ವೇಷಣೆ ಕಾರ್ಯಕ್ರದಲ್ಲಿ ಮೈಸೂರು ವಾರಿಯರ್ಸ್‌ನ ಮಾಲೀಕ ಅರ್ಜುನ್ ರಂಗ, ಮೈಸೂರು ವಾರಿಯರ್ಸ್‌ನ ಆಟಗಾರ ಕರುಣ್ ನಾಯರ್, ತಂಡದ ವ್ಯವಸ್ಥಾಪಕ ಸುರೇಶ್ ಎಂ ಆರ್ ಮತ್ತು ಮೈಸೂರು ವಾರಿಯರ್ಸ್‌ನ ಸಹಾಯಕ ಕೋಚ್ ವಿಜಯ್ ಮದ್ಯಾಳ್ಕರ್ ಹಾಜರಿದ್ದರು.









