ಬೆಂಗಳೂರು: ರಿಷಭ್ ಶೆಟ್ಟಿ ನಟನೆಯ ಕಾಂತಾರ – ಚಾಪ್ಟರ್ 1 ಸಿನಿಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗಿದಾರ ಎಂದು ಘೋಷಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಬಗ್ಗೆ ಮಾಹಿತಿ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕನ್ನಡ ಚಿತ್ರರಂಗ ಸ್ಯಾಂಡಲ್ ವುಡ್ ಎಂದೇ ಹೆಸರಾಗಿದೆ. ಹಾಗೆಯೇ ಕೆಎಸ್ಡಿಎಲ್ ಸಂಸ್ಥೆಯು ಸ್ಯಾಂಡಲ್ ಸೋಪ್ ಮತ್ತು ಗಂಧದ ಎಣ್ಣೆಗೆ ಹೆಸರಾಗಿದೆ. ಈಗ ಸಂಸ್ಥೆ ಮತ್ತು ಸ್ಯಾಂಡಲ್ ವುಡ್ ಚಿತ್ರತಂಡದ ನಡುವೆ ಒಪ್ಪಂದ ಆಗಿದೆ. ಚಿತ್ರತಂಡ ತನ್ನ ಪ್ರತೀ ಪ್ರದರ್ಶನದಲ್ಲೂ ಕೆಎಸ್ಡಿಎಲ್ ಉತ್ಪನ್ನಗಳಿಗೆ ಪ್ರಚಾರ ನೀಡಲಿದೆ ಎಂದಿದ್ದಾರೆ.
ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳಂ, ಇಂಗ್ಲಿಷ್ ಅಲ್ಲದೆ ಸ್ಪ್ಯಾನಿಷ್ ಹೀಗೆ 7 ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಚಿತ್ರ ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇಂತಹ ಚಿತ್ರತಂಡದ ಜತೆ ಕೆಎಸ್ ಡಿಎಲ್ ಕೈಜೋಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೆಎಸ್ಡಿಎಲ್ ಕಳೆದ ನೂರಾಹತ್ತು ವರ್ಷಗಳಿಂದಲೂ ಕರ್ನಾಟಕದ ಪರಂಪರೆ ಮತ್ತು ಅಸ್ಮಿತೆಯನ್ನು ಪ್ರತಿನಿಧಿಸುತ್ತಿರುವ ಬ್ರ್ಯಾಂಡ್ ಆಗಿದೆ ಎಂದಿದ್ದಾರೆ.
ಎರಡು ವರ್ಷಗಳಿಂದ ಈಚೆಗೆ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು ಹೊಂದಿದೆ. ಜೊತೆಗೆ ರಫ್ತು ವಹಿವಾಟಿಗೆ ಒತ್ತು ನೀಡಿದ್ದು, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಪ್ರಚಾರ ಮತ್ತು ಅತ್ಯುತ್ಕೃಷ್ಟತೆಗೆ ಗಮನ ಹರಿಸಿದೆ. ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳಲಾಗಿದೆ. ಇದರಿಂದ ಅಖಿಲ ಭಾರತ ಮಟ್ಟದಲ್ಲಿ ಹೊಸ ತಲೆಮಾರಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಈಗ ಕಾಂತಾರ ತಂಡದ ಜತೆ ಸಂಸ್ಥೆಯು ಕೈಜೋಡಿಸುತ್ತಿದ್ದು, ತನ್ನ ಉತ್ಪನ್ನಗಳ ಮಾರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶ ಈಡೇರಲಿದೆ ಎಂದಿದ್ದಾರೆ.
ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, ಶತಮಾನಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಸಂಸ್ಥೆಯ ಮೈಸೂರು ಸ್ಯಾಂಡಲ್ ಸೋಪ್ ಒಂದು ವಿಶ್ವಾಸಾರ್ಹ ಬ್ರ್ಯಾಂಡ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೊಂದಿದೆ. ಜನಪ್ರಿಯ ಮಾಧ್ಯಮವಾಗಿರುವ ಸಿನಿಮಾ ಮೂಲಕ ನಾವು ಜನರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಲು ಸಾಧ್ಯವಾಗಲಿದೆ ಎಂದಿದ್ದಾರೆ.






