ಹಾಸನ: ನಿಗೂಢ ಸ್ಪೋಟ ಸಂಭವಿಸಿ ಮನೆ ಧ್ವಂಸಗೊಂಡು ದಂಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಆಲೂರಿನಲ್ಲಿ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಖಾಸಗಿ ಕಂಪನಿ ಉದ್ಯೋಗಿ ಸುದರ್ಶನ್ ಆಚಾರ್ (32)ಹಾಗೂ ಅವರ ಪತ್ನಿ ಕಾವ್ಯಾ (27) ದಂಪತಿಯ ಅವರ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಮೇಲ್ನೋಟಕ್ಕೆ ಇದೊಂದು ಸಿಲಿಂಡರ್ ಬ್ಲಾಸ್ಟ್ ಎಂಬ ರೀತಿ ಕಾಣಿಸಿದೆ. ಸ್ಥಳೀಯರು ಆ್ಯಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸ್ಫೋಟದ ತೀವ್ರತೆ ಹೇಗಿತ್ತೆಂದರೆ, ಇಡೀ ಮನೆಯೇ ಧ್ವಂಸವಾಗಿದೆ. ಮನೆಯ ಹೊರಗಡೆ ಈ ಸ್ಫೋಟ ಆಗಿದ್ದು, ಮನೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಕಾಂಪೌಂಡ್ ಕುಸಿದುಬಿದ್ದಿದೆ. ಸ್ಫೋಟದ ತೀವ್ರತೆ ನೋಡಿದರೆ ಇದು ಜಿಲೆಟಿನ್ ಅಥವಾ ಡಿಟೋನೇಟರ್ ಇರಬಹುದೇ ಎಂಬ ಅನುಮಾನ ಮೂಡಿದೆ.ಅದೃಷ್ಟವಶಾತ್, ಮನೆ ಒಳಗಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಇದ್ದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು.
ದೀಪಾವಳಿಗೆ ಎಂದು ಪಟಾಕಿ ಏನಾದರೂ ಸಂಗ್ರಹಿಸಿದ್ದರೇ? ಇದರಿಂದಲೇ ದುರಂತ ಸಂಭವಿಸಿತಾ ಎಂಬ ಬಗ್ಗೆಯೂ ಆಲೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಮುಂದವರಿದಿದೆ. ಸಿಲಿಂಡರ್ ಸ್ಫೋಟವೇ ಸಂಭವಿಸಿದೆಯಾ ಅಥವಾ ಸ್ಫೋಟಕ್ಕೆ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.




